ಸುದ್ದಿ

ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

By admin

September 17, 2019

ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ.

ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ.

‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಫೆಂಗ್ ಲಿ ಹೇಳುತ್ತಾರೆ.

60 ವರ್ಷ ಮೇಲ್ಪಟ್ಟ 36 ಜನ ವಯಸ್ಕರನ್ನು ಸಂಶೋಧನೆಗೆ ಒಳಪಡಿಸಲಾಗಿತ್ತು. ಪ್ರತಿ ವ್ಯಕ್ತಿ ಗ್ರೀನ್ ಟೀ, ಬ್ಲಾಕ್ ಟೀ ಅಥವಾ ಯಾವುದೇ ಟೀಯನ್ನು ವಾರದಲ್ಲಿ ನಾಲ್ಕು ಬಾರಿಯಾದರೂ ಇಪ್ಪತ್ತೈದು ವರ್ಷಗಳ ಕಾಲ ಕುಡಿದರೆ ಮೆದುಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತದೆ ಎಂದು ತಿಳಿದು ಬಂದಿದೆ.