ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

ನಿಮಗೂ ಸಹ ಇದೆ ರೀತಿಯ ಕಾಯಿಲೆ ಇದೆಯೇ. ಇನ್ನು ಮುಂದೆ ಇಂತಹ ಪರಿಸ್ಥಿತಿಯಲ್ಲಿ ಎಲ್ಲರ ಮುಂದೆ ಮುಜುಗರಕ್ಕೆ ಒಳಗಾಗುವ ಬದಲು ಈ ಮನೆ ಮದ್ದು ಸೇವಿಸಿ ವಾಕರಿಕೆ ಬರುವುದನ್ನು ತಡೆಗಟ್ಟಬಹುದು.
ಶುಂಠಿ ಚಾಹ :-

ಶುಂಠಿ ವಾಂತಿ ನಿರೋಧಕವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದು ಜೀರ್ಣಕ್ರಿಯೆಗೂ ಒಳ್ಳೆಯದು. ವಾಂತಿ ಮಾಡಿಕೊಳ್ಳುವ ಲಕ್ಷಣವಿದ್ದರೆ ಪ್ರಯಾಣಕ್ಕೆ ಮೊದಲು ಶುಂಠಿ ಚಾಹ ಕುಡಿಯಿರಿ.
ಪುದೀನಾ : –
ಘಂ ಎಂದು ಪರಿಮಳ ನೀಡುವ ಪುದೀನಾ ಸಹ ವಾಂತಿ ನಿವಾರಕವಾಗಿ ಕೆಲಸ ಮಾಡುತ್ತದೆ. ವಾಂತಿಯಾಗುವುದನ್ನು ತಡೆಯಲು ಪುದೀನಾ ಚಾಹ ತುಂಬಾ ಸಹಾಯಕಾರಿ.

ಹಸಿ ಅಥವಾ ಒಣಗಿಸಿದ ಪುದೀನಾ ಎಲೆಗಳನ್ನು ನೀರಿನಲ್ಲಿ ಕುದಿಸಿ ಅದಕ್ಕೆ ಜೇನಿನ ಹನಿಯನ್ನು ಹಾಕಿ ಕುಡಿಯಿರಿ. ಪ್ರಯಾಣದ ವೇಳೆ ಪುದೀನಾ ಎಲೆಗಳನ್ನು ಜಗಿಯಬಹುದು. ಇದರ ಸುವಾಸನೆಯಿಂದಲೂ ವಾಂತಿಯನ್ನು ತಡೆಯಬಹುದು.
ಈರುಳ್ಳಿ ರಸ :-
ಇದು ವಾಂತಿ ಮತ್ತು ಪಿತ್ತೋದ್ರೇಕವನ್ನು ಕ್ಷಣಮಾತ್ರದಲ್ಲಿ ನಿಲ್ಲಿಸುತ್ತದೆ. ಮಿಕ್ಸಿಗೆ ಹಾಕಿ ಕೆಲವು ಈರುಳ್ಳಿಗಳನ್ನು ಪುಡಿಮಾಡಿ ಮತ್ತು ಅದರಿಂದ ರಸ ತೆಗೆಯಿರಿ.

ಇದಕ್ಕೆ ನೀವು ಪುದೀನಾ ಸಾರವನ್ನು ಸೇರಿಸಬಹುದು. ಈ ಮಿಶ್ರಣ ಪಿತ್ತೋದ್ರೇಕ ಮತ್ತು ವಾಂತಿಯನ್ನು ನಿಲ್ಲಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡಲಿದೆ.
ಕಾಳುಮೆಣಸು ಮತ್ತು ಲಿಂಬೆ ರಸ :-
ನಿಂಬೆ ಹಣ್ಣು ವಾಂತಿ ನಿವಾರಣೆಗೆ ಉತ್ತಮ ಎಂಬುದು ನಿಮಗೆ ಗೊತ್ತಿದೆ. ಅದೇ ರೀತಿ ಕಾಳುಮೆಣಸು ಮತ್ತು ಲಿಂಬೆ ರಸ ಬೆರೆಸಿ ಸೇವಿಸಿದರೆ ತಲೆನೋವು, ಪಿತ್ತೋದ್ರೇಕ ಮತ್ತು ತಲೆತಿರುಗುವಿಕೆಯನ್ನು ತಡೆಯುತ್ತದೆ.

ಉಪ್ಪು ಅಥವಾ ಕರಿಮೆಣಸನ್ನು ಬಿಸಿಯಾದ ಲಿಂಬೆರಸದೊಂದಿಗೆ ಮಿಶ್ರಣ ಮಾಡಿ ಮತ್ತು ಪ್ರಯಾಣಕ್ಕೆ ಮೊದಲು ಇದನ್ನು ಕುಡಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…