ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ.
ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು ಹಾರದೆ ಇದ್ದರೂ ಕನಿಷ್ಟ ಹೆಲಿಕಾಪ್ಟರ್ ರೀತಿ ಕಾಣುವಂತೆ ಸಿದ್ಧಪಡಿಸುವುದು ಆತನ ಗುರಿಯಾಗಿತ್ತು.ಈ ಕಾರು ನೋಡಲು ಹೆಲಿಕಾಪ್ಟರ್ ರೀತಿ ಕಾಣಿಸುತ್ತದೆ ಆದರೆ ಇದು ಹಾರಾಡುವುದಿಲ್ಲ. ಹೆಲಿಕಾಪ್ಟರ್‍ನ ಮೂಲ ವಿನ್ಯಾಸ ಹೇಗೆ ಇರುತ್ತದೋ ಅದೇ ರೀತಿ ಕಾರನ್ನು ಯುವಕ ವಿನ್ಯಾಸಗೊಳಿಸಿದ್ದಾನೆ. ಈ ಅಪರೂಪದ ವಿನ್ಯಾಸವನ್ನು ಪೂರ್ಣಗೊಳಿಸಲು ಮಿಥಿಲೇಶ್ ಮತ್ತು ಅವರ ಸಹೋದರ ಸುಮಾರು ಏಳು ತಿಂಗಳು ತೆಗೆದುಕೊಂಡಿದ್ದಾರೆ.
ಅಲ್ಲದೆ ಇದಕ್ಕೆ ಸರಿಸುಮಾರು ಏಳು ಲಕ್ಷ ರೂಪಾಯಿಗಳನ್ನು ಸಹೋದರರು ಖರ್ಚು ಮಾಡಿದ್ದಾರೆ ಎನ್ನಲಾಗಿದೆ.ಈ ಹೆಲಿಕಾಪ್ಟರ್ ಕಾರು ವಿನ್ಯಾಸದ ಬಗ್ಗೆ ಮಾತನಾಡಿರುವ ಮಿಥಿಲೇಶ್, ‘ ನಾನು ಹೆಲಿಕಾಪ್ಟರ್ ಅನ್ನು ಸ್ವಂತವಾಗಿ ನಿರ್ಮಿಸಿ ಅದರಲ್ಲಿ ಹಾರಾಟ ನಡೆಸಬೇಕೆಂದು ಬಾಲ್ಯದಿಂದಲೂ ಕನಸು ಕಂಡಿದ್ದೆ. ಆದರೆ ನನಗೆ ಬಲವಾದ ಹಿನ್ನೆಲೆ ಇಲ್ಲ ಆದ್ದರಿಂದ ನನ್ನ ಕಾರನ್ನು ಹೆಲಿಕಾಪ್ಟರ್ ರೀತಿ ಕಾಣುವಂತೆ ಮಾಡಿದೆ’ ಎಂದು ಖುಷಿಯನ್ನು ಹಂಚಿಕೊಂಡಿದ್ದಾನೆ.
ಈ ಹೆಲಿಕಾಪ್ಟರ್ ಕಾರಿನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿದ ಕೆಲವರು ಯುವಕನ ಪ್ರಯತ್ನವನ್ನು ಮೆಚ್ಚಿದ್ದರೆ, ಇನ್ನು ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ರೀತಿ ಕಾರನ್ನು ವಿನ್ಯಾಸ ಮಾಡಿಕೊಂಡು ರಸ್ತೆಗಿಳಿಸಿದರೆ ಇತರೆ ವಾಹನ ಸವಾರರಿಗೆ ತೊಂದರೆ ಆಗುತ್ತದೆ. ತನ್ನ ಕನಸು ನನಸಾಗಿಸಿಕೊಳ್ಳಲು ಇತರರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಕಿಡಿಕಾರುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….