Cinema

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

By admin

August 27, 2019

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ.

‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದರೂ,

ಚಿತ್ರೀಕರಣ ಆರಂಭವಾಗಿರಲಿಲ್ಲ. ‘ಯುವರತ್ನ’ ಚಿತ್ರೀಕರಣ ಮುಗಿಯುತ್ತಿದ್ದಂತೆ ‘ಜೇಮ್ಸ್’ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದೆ.