ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ ಅಂಶಗಳು.

ಬೆಳ್ಳಿಯಲ್ಲಿ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಗುಣವಿದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಬೆಳ್ಳಿಯ ಪಾತ್ರೆಗಳಿಗೆ ಇತರ ಲೋಹದ ಪಾತ್ರೆಗಳಿಗೆ ಅಂಟಿಕೊಂಡಷ್ಟು ಸುಲಭವಾಗಿ ಬ್ಯಾಕ್ಟೀರಿಯಾಗಳು ಅಂಟಿಕೊಳ್ಳುವುದಿಲ್ಲ. ಬೆಳ್ಳಿಯ ಪಾತ್ರೆಗಳನ್ನು ಸ್ಟೆರಿಲೈಸ್ ಮಾಡುವ ಅಗತ್ಯವಿಲ್ಲ.

ಹಾಗಾಗಿ ಮಕ್ಕಳಿಗೆ ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿಸಿದರೆ ಬ್ಯಾಕ್ಟೀರಿಯಾ ಸೋಂಕಿನ ಭಯವಿಲ್ಲ. ಇನ್ನು, ಬೆಳ್ಳಿ ಪಾತ್ರೆಯಲ್ಲಿಟ್ಟ ಆಹಾರ ಹಾಗೂ ಪಾನೀಯಗಳು ಬೇಗ ಕೆಡುವುದಿಲ್ಲ. ಅವು ತಾಜಾ ಆಗಿರುತ್ತವೆ. ಇಂದು ನಾವು ಬಳಸುವ ಅನೇಕ ವಾಟರ್ ಪ್ಯೂರಿಫೈರ್ಗಳಲ್ಲಿ ಬೆಳ್ಳಿಯನ್ನು ಬಳಸಿರುತ್ತಾರೆ.

ಅದೇ ರೀತಿ, ಮಕ್ಕಳಿಗೆ ಬೆಳ್ಳಿಯ ಬಳೆ, ಕಡಗ, ಉಡದಾರಗಳನ್ನು ಹಾಕುವುದಕ್ಕೂ ಕಾರಣವಿದೆ. ಅವು ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡುತ್ತವೆ. ಈ ಎಲ್ಲ ಕಾರಣಗಳಿಂದ ಬೆಳ್ಳಿಯ ಪಾತ್ರೆ ಹಾಗೂ ಆಭರಣಗಳನ್ನು ಬಳಸುವ ಅಭ್ಯಾಸ ಬೆಳೆದುಬಂದಿದೆ.

ಅದು ಚಾಲ್ತಿಯಲ್ಲಿರಲಿ ಎಂಬ ಕಾರಣಕ್ಕೆ ಬೆಳ್ಳಿ ಪವಿತ್ರ ಲೋಹ ಎಂದು ಕರೆಯಲಾಗಿದೆ. ಬೆಳ್ಳಿ ಪಾತ್ರೆಯಲ್ಲಿ ಉಣ್ಣುವುದು ಹಾಗೂ ಬೆಳ್ಳಿಯನ್ನು ಧರಿಸುವುದು ಮಕ್ಕಳಗಿಷ್ಟೇ ಅಲ್ಲ, ದೊಡ್ಡವರಿಗೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.