ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ.
ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು ರಾಖಿ ಶೀರ್ಷಿಕೆ ಹಾಕಿದ್ದಾಳೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದನ್ನು ಕೂಡ ಹಾಕಿದ್ದು, ಚಿತ್ರ ಧಾರಾ 370 ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದ್ದಾಗಿದೆ ಎಂದು ರಾಖಿ ಹೇಳಿದ್ದಾಳೆ.
ರಾಖಿ ಈ ಚಿತ್ರದಲ್ಲಿ ಪಾಕಿಸ್ತಾನಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾಳೆ. ಸಣ್ಣ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ತಿರುವ ಭಯೋತ್ಪಾದನೆ ಸಂಘಟನೆ ವಿರುದ್ಧ ನನ್ನ ಹೋರಾಟವೆಂದು ರಾಖಿ ಹೇಳಿದ್ದಾಳೆ. ರಾಖಿ ಫೋಟೋಕ್ಕೆ ವ್ಯಕ್ತಿಯೊಬ್ಬ ಕಮೆಂಟ್ ಮಾಡಿದ್ದಾನೆ.
ಪಾಕಿಸ್ತಾನಿ ಪಾತ್ರದಲ್ಲಿ ನಿನ್ನನ್ನು ನೋಡಲು ಸಾಧ್ಯವಿಲ್ಲ. ಇಸ್ಲಾಂ ಒಂದು ಶಾಂತಿ ಸಾರುವ ಧರ್ಮವೆಂದು ಆತ ಹೇಳಿದ್ದಾನೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಖಿ, ಇದು ನನ್ನ ಚಿತ್ರ. ನಿನಗೆ ಇಷ್ಟವಾಗದೆ ಹೋದ್ರೆ ಇನ್ಸ್ಟ್ರಾಗ್ರಾಮ್ ನಿಂದ ಹೊರ ಹೋಗಬಹುದು ಎಂದು ರಾಖಿ ಕಮೆಂಟ್ ಮಾಡಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.