ಸುದ್ದಿ

ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

By admin

September 13, 2019

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ.

ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಒಂದೂವರೆ ಕೋಟಿಗಿಂತಲೂ ಕಡಿಮೆ ವಾರ್ಷಿಕ ವಹಿವಾಟು ನಡೆಸುವ ಎಲ್ಲ ಅಂಗಡಿ ಮಾಲೀಕರಿಗೆ, ಸ್ವಂತ ಕೆಲಸ ಮಾಡುವವರಿಗೆ ಇದ್ರ ಲಾಭ ಸಿಗಲಿದೆ. 18ರಿಂದ 40 ವರ್ಷದೊಳಗಿನ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆಯಬಹುದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಿಲ್ಲರೆ ವ್ಯಾಪಾರಿಗಳ ಜೊತೆ ಸಣ್ಣ ರೈತರಿಗೂ ಕಿಸಾನ್ ಮಾನ್ ಧನ್ ಯೋಜನೆ ಘೋಷಣೆ ಮಾಡಿದ್ದಾರೆ.

18ರಿಂದ 40 ವರ್ಷದೊಳಗಿನ ರೈತರು ಹೆಸರು ನೋಂದಾಯಿಸಬಹುದಾಗಿದೆ. ಈ ಯೋಜನೆಯಲ್ಲಿ ಅರ್ಧದಷ್ಟು ಪ್ರೀಮಿಯಂ ರೈತ ಪಾವತಿಸಿದ್ರೆ ಉಳಿದ ಅರ್ಧವನ್ನು ಸರ್ಕಾರ ಪಾವತಿಸಲಿದೆ. 60 ವರ್ಷದ ನಂತ್ರ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ ಸಿಗಲಿದೆ.