ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು ಸುಲಭವಾಗಿ ದೊರೆಯುವ೦ತಹ ಹಣ್ಣೂ ಕೂಡ ಹೌದು.
ಆರೋಗ್ಯವೃದ್ಧಿ
ಕಿತ್ತಳೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್ ಸಿ ಅಂಶ ಹೊಂದಿರುವ ಈ ಹಣ್ಣು ಸೇವಿಸುವುದರಿಂದ ಅಲ್ಜೈಮರ್, ಅರ್ಥರೈಟಿಸ್ ಹಾಗೂ ಕಣ್ಣಿನ ಪೂರೆಯುಂಟಾಗುವಂತಹ ಕಾಯಿಲೆಗಳನ್ನು ದೂರಾಗಿಸುತ್ತದಂತೆ. ಇನ್ನು ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶ ದೇಹದ ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆ ನಿವಾರಿಸುತ್ತದೆ. ಅಷ್ಟೇ ಏಕೆ? ಕ್ಯಾನ್ಸರ್ ಹಾಗೂ ಹೃದಯ ಕಾಯಿಲೆಗಳನ್ನು ದೂರವಿಡುತ್ತದಂತೆ.

ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು.
ತ್ವಚೆಯ ಆರೋಗ್ಯಕ್ಕೆ ಸೀಬೆ ಹಣ್ಣಿನಲ್ಲಿರುವ ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುವ ಒ೦ದು ಪ್ರಮುಖ ವಿಟಮಿನ್ ಆಗಿದೆ. ಸೀಬೆ ಹಣ್ಣಿನಲ್ಲಿರುವ ಆ೦ಟಿ ಆಕ್ಸಿಡೆ೦ಟ್ ಗಳು ತ್ವಚೆಯು ತಾರುಣ್ಯಪೂರ್ಣವಾಗಿ ಕಾಣವ೦ತಾಗಲು ಸಹಕರಿಸುತ್ತವೆ

ಕಾಂತಿ ಹೆಚ್ಚಳ
ವಿಟಮಿನ್ ಎ, ಬಿ ಹಾಗೂ ಸಿ ಮತ್ತು ಪೊಟಾಶಿಯಂ ಅಂಶಗಳನ್ನು ಹೊಂದಿರುವ ಸೀಬೆಕಾಯಿ, ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದಂತೆ. ಇದಕ್ಕಾಗಿ ಸೀಬೆ ಎಲೆಗಳ ಪೇಸ್ಟ್ ಮಾಡಿ, ಅದನ್ನ ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನಾಂಶ ಮಾಯವಾಗಿ ಚರ್ಮ ಬಿಗಿಯಾಗಿ ಕಾಂತಿಯುಕ್ತವಾಗುತ್ತದೆ ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್.
ಮೆದುಳು ಚುರುಕು
ಇದರಲ್ಲಿರುವ ವಿಟಮಿನ್ ಬಿ6ನಿಂದ ಮಿದುಳು ಚುರುಕಾಗುತ್ತದೆ. ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗದಂತೆ ತಡೆಗಟ್ಟುತ್ತವೆ. ಕೆಲವರಿಗೆ ಸೀಬೆಹಣ್ಣಿನಿಂದ ಗಂಟಲಲ್ಲಿ ಅಲರ್ಜಿಯಾಗುವ ಸಾಧ್ಯತೆಗಳಿವೆ. ಅಂಥವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು. ವೃದ್ಧರು, ಹಲ್ಲಿನ ತೊಂದರೆ ಇರುವವರು ಸೀಬೆಹಣ್ಣಿನ ಜ್ಯೂಸ್ ಸೇವಿಸಬಹುದು.

ನೆಗಡಿ ನಿವಾರಕ
ಸೀಬೆಹಣ್ಣಿನಿಂದ ಶೀತ, ನೆಗಡಿ ಉಂಟಾಗುವುದಿಲ್ಲ. ಬದಲಿಗೆ ಶೀತ-ನೆಗಡಿಯನ್ನು ಉಂಟು ಮಾಡುವ ಬ್ಯಾಕ್ಟೀರಿಯಗಳನ್ನು ನಾಶಗೊಳಿಸುತ್ತವೆ. ಈ ಗುಣದಿಂದ ಇದನ್ನು ಅತಿಸಾರ ಹಾಗೂ ವಾಂತಿ-ಭೇದಿ ಇರುವ ಮಂದಿ ಸೇವಿಸುವುದರಿಂದ ಉಪಯುಕ್ತ
ಕಣ್ಣುಗಳ ಆರೋಗ್ಯಕ್ಕೆ ಮತ್ತೊಮ್ಮೆ, ಸೀಬೆ ಹಣ್ಣಿನ ಸೋಜಿಗವೆ೦ದೆನಿಸುವಷ್ಟು ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದರಲ್ಲಿ ವಿಟಮಿನ್ ಎ ಶೇ. 21 ಇದ್ದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಇರುಳು ಕುರುಡು ಉಂಟಾಗದಂತೆ ಕಣ್ಣನ್ನು ರಕ್ಷಣೆ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ವೃದ್ಧಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅತ್ಯ೦ತ ಪುಷ್ಟಿದಾಯಕವಾದ ಆಹಾರವಸ್ತುಗಳ ಪೈಕಿ ಸೀಬೆ ಹಣ್ಣೂ ಸಹ ಒ೦ದು. ಸೀಬೆ ಹಣ್ಣಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಯು ಶರೀರದ ರೋಗನಿರೋಧಕ ವ್ಯವಸ್ಥೆಗೆ ಬಲವನ್ನೊದಗಿಸುತ್ತದೆ ಹಾಗೂ ತನ್ಮೂಲಕ ರೋಗಗಳ ವಿರುದ್ಧ ಸೆಣಸಾಡುವ ನಿಮ್ಮ ಶರೀರದ ಸಾಮರ್ಥ್ಯವನ್ನು ಸುಧಾರಿಸುತ್ತದೆ
souce : internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.