ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮನೆ ಮನೆಗೆ ತೆರಳಿ ಪೊಲಿಯೋ ಡ್ರಾಪ್ಸ್ ನೀಡುವ ಕಾರ್ಯಕ್ರಮದ ಭಾಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಒಂದೂವರೆ ವರ್ಷ ಪ್ರಾಯದ ಬಾಲಕನಿಗೆ ಪೊಲೀಯೋ ಡ್ರಾಪ್ಸ್ ನೀಡಿದ ಅರ್ಧ ತಾಸಿನೊಳಗೆ ಆತನ ಬಾಯಲ್ಲಿ ನೊರೆ ಹೊರಬರಲು ಆರಂಭವಾಯಿತು. ಒಡನೆಯೇ ಬಾಲಕನನ್ನು ಕೃಷ್ಣ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಷ್ಟರೊಳಗಾಗಿಯೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು.
ಬಾಲಕನ ಮನೆಯವರು ಮೂಲತಃ ಆಗ್ರಾದವರು. ಅವರು ತಮ್ಮ ಬಂಧುಗಳನ್ನು ಕಾಣಲು ಫೌಜಿ ಮೊಹಲ್ಲಾಗೆ ಬಂದಿದ್ದರು. ನತದೃಷ್ಟ ಬಾಲಕನು ಮನೆಯಲ್ಲಿ ಮಲಗಿದ್ದಾಗ ಆತನನ್ನು ಎಬ್ಬಿಸಿ ಆತನಿಗೆ ಆಶಾ ಕಾರ್ಯಕರ್ತೆಯರು ಪೊಲೀಯೋ ಡ್ರಾಪ್ಸ್ ನೀಡಿದರು ಎಂದು ವರದಿಗಳು ತಿಳಿಸಿವೆ.
ಜಿಲ್ಲಾ ಪೊಲೀಯೋ ಅಭಿಯಾನದ ಅಧಿಕಾರಿಯಾಗಿರುವ ಡಾ. ಜಸ್ಬೀರ್ ಸಿಂಗ್ ಈ ಬಗ್ಗೆ ಹೇಳಿರುವುದು ಇಷ್ಟು :
ನಾವು ಐದು ದಿನಗಳ ಈ ಪೋಲಿಯೋ ನಿರ್ಮೂಲನ ಅಭಿಯಾನದಲ್ಲಿ 3.75 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಹಾಕಿದ್ದೇವೆ; ಆದರೆ ಯಾವುದೇ ಮಗುವಿಗೆ ಯಾವುದೇ ರೀತಿಯ ಅನಾರೋಗ್ಯ, ತೊಂದರೆ ಕಾಣಿಸಿದ್ದಿಲ್ಲ. ಈ ಪ್ರಕರಣದಲ್ಲಿ ಬಾಲಕನ ಸಾವಿಗೆ ಬೇರೇನೋ ಕಾರಣ ಇರಬೇಕು.
ಪೋಲಿಯೋ ಡ್ರಾಪ್ಸ್ ಹಾಕಿದ ಅರೆ ತಾಸಿನೊಳಗೆ ಬಾಲಕನು ಸತ್ತಿರುವುದು ಏನೋ ಕಾಕತಾಳೀಯವಾಗಿರಬೇಕು. ವೈದ್ಯರ ತಂಡವು ಮೃತ ಬಾಲಕನ ಮರಣೋತ್ತರ ಪರೀಕ್ಷೆಯನ್ನು ನಡೆಸಲಿದ್ದಾರೆ ಮತ್ತು ಆವರ ವರದಿಯಿಂದ ಬಾಲಕನ ಸಾವಿನ ನಿಜವಾದ ಕಾರಣವೇನು ಎಂಬುದು ಗೊತ್ತಾಗಲಿದೆ.
“ಬಾಲಕನ ಸಾವಿಗೂ ಪೋಲಿಯೋ ಡ್ರಾಪ್ಸ್ ಗೂ ಯಾವುದೇ ಸಂಬಂಧವಿಲ್ಲ; 1995ರಿಂದಲೂ ನಾವು ಈ ಅಭಿಯಾನವನ್ನು ಯಾವುದೇ ಚ್ಯುತಿ, ಹುಳಕು, ವ್ಯತಿರಿಕ್ತ ಪರಿಣಾಮವಿಲ್ಲದೇ ನಡೆಸಿಕೊಂಡು ಬರುತ್ತಿದ್ದೇವೆ ಎಂದು ಡಾ. ಜಸ್ಬೀರ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…