ಉಪಯುಕ್ತ ಮಾಹಿತಿ

ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.!ಪ್ರಧಾನಿ ಕಾರ್ಯಾಲಯದಿಂದ ಬಂದ ಮಾಹಿತಿ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

By admin

April 24, 2018

ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು.

ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.

ಕೇಂದ್ರ ಸರ್ಕಾರ 1,000 ಹಾಗೂ 500 ರುಪಾಯಿ ನೋಟ್ ನಿಷೇಧಿಸಿದ ನಂತರ 2016, ನವೆಂಬರ್ 26ರಂದು ಮೋಹನ್ ಕುಮಾರ್ ಶರ್ಮಾ ಅವರು, 2014ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ಅವರು ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರುಪಾಯಿ ಹಾಕುವುದಾಗಿ ಹೇಳಿದ್ದರು. ಆ ಬಗ್ಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದರು.

ಮಾಹಿತಿ ಆಯೋಗಕ್ಕೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಕಾರ್ಯಾಲಯ, ಜನರ ಖಾತೆಗೆ 15 ಲಕ್ಷ ರೂ. ಜಮಾ ಮಾಡುವ ವಿಚಾರ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಪ್ರಧಾನಿ ಕಾರ್ಯಾಲಯದ ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ತಿಳಿಸಿದೆ.