ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

493

ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ ದೇಬ್, ತಮ್ಮ ಮಹಿಳಾ ಸಹೋದ್ಯೋಗಿ ಸಮಾಜ ಕಲ್ಯಾಣ ಸಚಿವೆ ಸಂತನಾ ಚಕ್ಮಾ ಅವರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಇದರಿಂದ ಇರುಸುಮುರುಸು ಸಂತನಾ ಕೈ ತಳ್ಳಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಅಂತೆ ಪ್ರತಿಪಕ್ಷಗಳು ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿವೆ. ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಕೂಡಾ ಪಾಲ್ಗೊಂಡಿದ್ದು, ಈ ಘಟನೆಯಿಂದ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಘಟನೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಮನೋಜ್ ಕಾಂತಿ ದೇಬ್ ಆರೋಪವನ್ನು ನಿರಾಕರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ