ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ. ಮೋದಿ ಭಾಷಣ ನಿಲ್ಲಿಸಲು ಕಾರಣವಾಗಿದ್ದು ಆಜಾನ್(ನಮಾಜ್). ಬುಧವಾರ ನವ್ಸಾರಿಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಮೀಪದ ಮಸೀದಿಯಿಂದ ಆಜಾನ್(ನಮಾಜ್) ಧ್ವನಿ ಕೇಳಿತು. ತಕ್ಷಣವೇ ಪ್ರಧಾನಿ ಮೋದಿ ಕೆಲ ಕ್ಷಣಗಳ ಕಾಲ ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾದರು. ನಂತರ ಆಜಾನ್ ಮುಗಿದ ಬಳಿಕ ಮತ್ತೆ ಭಾಷಣ ಮುಂದುವರೆಸಿದರು.

ಪ್ರಧಾನಿ ಮೋದಿ ಅವರು ತಮ್ಮ ಭಾಷಣವನ್ನು ನಿಲ್ಲಿಸುತ್ತಿದ್ದಂತೆ ಸಭಿಕರಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು. ಆದರೆ ಮೋದಿ ಅವರು ಆಜಾನ್ ಮುಗಿದ ಬಳಿಕ ಭಾಷಣ ಆರಂಭಿಸುತ್ತಿದಂತೆ ಎಲ್ಲ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಮೋದಿಯವರ ನಡೆಯನ್ನು ಸ್ವಾಗತಿಸಿದರು.
ಇದೇ ಮೊದಲಲ್ಲ:-
ಆಜಾನ್ ವೇಳೆ ಮೋದಿ ಅವರು ಭಾಷಣ ನಿಲ್ಲಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಪಶ್ಚಿಮ ಬಂಗಾಳದ ಖರಗ್‍ಪುರದಲ್ಲಿ ಭಾಷಣ ಮಾಡುವ ವೇಳೆ ಆಜಾನ್ ಧ್ವನಿ ಕೇಳಿಸಿದಾಗಲೂ ಪ್ರಧಾನಿ ತಮ್ಮ ಭಾಷಣವನ್ನು ನಿಲ್ಲಿಸಿ ಮೌನ ವಹಿಸಿದ್ದರು.

ನಂತರ ಭಾಷಣ ಆರಂಭಿಸಿದ ಅವರು ಯಾರ ಪ್ರಾರ್ಥನೆಯನ್ನು ನಡುವೆ ಅಡ್ಡಿಪಡುಸುವುದು ನನಗೆ ಇಷ್ಟವಿಲ್ಲ. ಹಾಗಾಗಿ ಭಾಷಣವನ್ನು ನಡುವೆ ನಿಲ್ಲಿಸಬೇಕಾಯಿತು ಎಂದು ಹೇಳಿದ್ದರು.
ಭಾಷಣ ವೇಳೆ ಮತ್ತೊಂದು ಅಚ್ಚರಿ:-
ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಮತ್ತೊಂದು ಅಚ್ಚರಿ ಘಟನೆ ನಡೆಯಿತು. ಪ್ರಧಾನಿ ಮೋದಿಯಂತೆ ಬಟ್ಟೆತೊಟ್ಟಿದ್ದ ಪುಟ್ಟ ಪೋರನೊಬ್ಬ ವೇದಿಕೆ ಮೇಲೆ ಬಂದು ಪ್ರಧಾನಿಗಳಿಗೆ ಶುಭಾಶಯ ತಿಳಿಸಿದ. ಬಾಲಕನನ್ನು ಮಾತನಾಡಿಸಿದ ಪ್ರಧಾನಿ ಮೋದಿ ಬಾಲಕನ ಬಳಿ ಬಂದು ಶುಭ ಕೋರಿದರು.

ಕಳೆದ ಎರಡು ದಿನಗಳಿಂದ ಗುಜರಾತ್ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…