ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.
ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.
ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.
ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್‌ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.
ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.
ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು. ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.