ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ.

ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ ಮಾಡಲು ಬಂದಾಗ ಖಾಕಿ ಬಲೆಗೆ ಬಿದ್ದಿದ್ದಾರೆ. ಇನ್ನೂ ಈ ಹಣದ ಮೋಸಕ್ಕೆ ಸಂಬಂಧಪಟ್ಟಂತೆ ರಾಮಮೂರ್ತಿನಗರದಲ್ಲಿ ವಂಚನೆ ಪ್ರಕರಣ ಕೂಡ ದಾಖಲಾಗಿತ್ತು.

ಈ ಮೂವರು ಆರೋಪಿಗಳು ನಂಬರ್ ಪ್ಲೇಟ್ ಇಲ್ಲದ ಸ್ಕೋಡಾ ಕಾರಿನಲ್ಲಿ ಬಂದು ದೊಡ್ಡ ದೊಡ್ಡ ಬಾಕ್ಸ್‌ಗಳಲ್ಲಿ ನಿನ್ನೆ ಸಂಜೆ ನೆಲಮಂಗಲದಲ್ಲಿರುವ ICICI ಬ್ಯಾಂಕ್ ಬ್ರಾಂಚ್‌ನಲ್ಲಿ ಹಣ ಡೆಪಾಸಿಟ್ ಮಾಡಲು ಬಂದಿದ್ದರು. ರಾತ್ರಿ 11ಗಂಟೆವರೆಗೆ ಬ್ಯಾಂಕ್ ಸಿಬ್ಬಂದಿ ಹಣ ಎಣಿಕೆ ಮಾಡಿ, ಅನುಮಾನ ಮೇರೆಗೆ ಬ್ಯಾಂಕ್ ಮ್ಯಾನೇಜರ್ ನೆಲಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಪರೀಕ್ಷಿತ್ ನಾಯ್ಡು, ಗುರು ಪ್ರಸಾದ್, ಹಾಗೂ ರಂಗಸ್ವಾಮಿ ಪೊಲೀಸ್ ವಶದಲ್ಲಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಹಣ ಧಮ್ಮನಗಿ ವಿಷನ್ ಪೌಂಡೇಷನ್‌ಗೆ ಸೇರಿದ್ದು ಎಂಬ ಮಾಹಿತಿ ಬಹಿರಂಗವಾಗಿದ್ದು, ಸಿಕ್ಕಿಬಿದ್ದ ಮೂವರು ಆರೋಪಿಗಳು ಇದೆ ಧಮ್ಮನಗಿ ಪೌಂಡೇಷನ್ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಪೌಂಡೇಷನ್ ನಕಲಿ ಪೋನ್ ನಂ ಬಳಸಿ ಹಣ ಡ್ರಾ ಮಾಡಿರುವ ಮಾಹಿತಿ, ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಒಟ್ನಲ್ಲಿ ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…