ಸುದ್ದಿ

ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

46

ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು ದೂರು ನೀಡಿದ್ದಾರೆ. ಮಹಿಳೆ ತನ್ನ ದೂರಿನಲ್ಲಿ, “ವಿನೋದ್ ಹಲವು ಬಾರಿ ಫ್ಲೈಯಿಂಗ್ ಕಿಸ್ ಮಾಡಿ ಅಶ್ಲೀಲ ಸನ್ನೆ ಮಾಡುವ ಮೂಲಕ ನನಗೆ ಕಿರುಕುಳ ನೀಡುತ್ತಿದ್ದಾನೆ” ಎಂದು ಉಲ್ಲೇಖಿಸಿದ್ದರು.

ಆರೋಪಿ ವಿನೋದ್ ಟಾಪ್ ಫ್ಲೋರ್ ಫ್ಲಾಟ್‍ನಲ್ಲಿ ವಾಸಿಸುತ್ತಾನೆ. ಅಲ್ಲದೆ ಆತ ನನ್ನನ್ನು ನೋಡಿ ಅಶ್ಲೀಲವಾಗಿ ಸನ್ನೆ ಮಾಡುತ್ತಾನೆ. ಕೆಲವು ಬಾರಿ ಅಶ್ಲೀಲವಾಗಿ ಕಮೆಂಟ್ ಕೂಡ ಮಾಡುತ್ತಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.ಮಹಿಳೆ ವಿರುದ್ಧ ದೂರು ದಾಖಲಿಸುತ್ತಿದ್ದಂತೆ, ಆರೋಪಿ ವಿನೋದ್ ಕೂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಪತಿ – ಪತ್ನಿ ಇಬ್ಬರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವಿನೋದ್ ಆರೋಪಿಸಿದ್ದಾನೆ. ಆದರೆ ಪೊಲೀಸರಿಗೆ ದಂಪತಿ, ವಿನೋದ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷಿ ಸಿಗಲಿಲ್ಲ.ಸದ್ಯ ಮೋಹಾಲಿ ನ್ಯಾಯಾಲಯ ಆರೋಪಿ ವಿನೋದ್‍ಗೆ 3 ವರ್ಷ ಜೈಲು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…