ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ.

ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ ಲಾಭ ಗಳಿಸುತ್ತಿದ್ದಾರೆ.

ಬರಗಾಲದಿಂದ ಬೆಳೆಗಳು ಕೈಕೊಟ್ಟಾಗ ಹೈನುಗಾರಿಕೆ ಮೊರೆಹೋದ ರೋಜಾ, ಹಸು ಸಾಕಾಣಿಕೆ ಮೂಲಕ ತಮ್ಮ ತೋಟದ ಮನೆಯ ಪಕ್ಕದ ಶೆಡ್ ಒಂದರಲ್ಲಿ ಸುಮಾರು 200 ಕ್ಕೂ ಹೆಚ್ಚು ಹಸುಗಳನ್ನ ಸಾಕಿದ್ದಾರೆ. ಹಸುಗಳಿಗೆ ಸಮಯಕ್ಕೆ ಸರಿಯಾಗಿ ಒಣ ಹಾಗೂ ಹಸಿರು ಮೇವು, ಬೂಸಾ ಸೇರಿದಂತೆ ಪೌಷ್ಠಿಕ ಆಹಾರವನ್ನ ಕೊಟ್ಟು ತಮ್ಮ ಮಕ್ಕಳಂತೆ ಹಸುಗಳನ್ನ ಆರೋಗ್ಯವಾಗಿ ನೋಡಿಕೊಳ್ಳುತ್ತಿದ್ದಾರೆ.

ರೋಜಾ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಹಸುವಿನ ಸಗಣಿಯನ್ನ ಗೊಬ್ಬರವನ್ನಾಗಿ ಬಳಸಿಕೊಂಡು ಹಸಿ ಮೇವನ್ನ ಬೆಳೆದು ಹಸುಗಳಿಗೆ ಬೇಕಾದ ಪೌಷ್ಟಿಕಾಂಶವುಳ್ಳ ಆಹಾರ ನೀಡುತ್ತಿದ್ದಾರೆ. ಹಸುಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಅವುಗಳ ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮ್ಮೆ ಪಶು ವೈದ್ಯರನ್ನ ಕರೆಸಿ ತಪಾಸಣೆ ಮಾಡಿಸಿ ಚಿಕಿತ್ಸೆ ಕೋಡಿಸುತ್ತಿದ್ದಾರೆ. ಗೋವುಗಳ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.

ಹೀಗಾಗಿ ಇವರ ಸಾಧನೆಯನ್ನು ಗಮನಿಸಿದ ಭಾರತೀಯ ಹೈನುಗಾರಿಕೆ ಇಲಾಖೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಭೀಕರ ಬರದಿಂದ ತತ್ತರಿಸಿ ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ನಡುವೆ ನೂತನ ತಂತ್ರಜ್ಞಾನದ ಜೊತೆಗೆ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಹೈನುಗಾರಿಕೆ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸಿರುವ ಈ ಮಹಿಳೆ ದೇಶಕ್ಕೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…