ಸಿನಿಮಾ

ಬಾಹುಬಲಿ-2 ದಾಖಲೆಗಳು ಉಡೀಸ್ !!!

306

ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು. ಇದೀಗ ‘ಬಾಹುಬಲಿ 2’ ಚಿತ್ರದ ಎಲ್ಲ ದಾಖಲೆಗಳನ್ನು ಮತ್ತೊಂದು ಸೌತ್‌ ಇಂಡಿಯನ್‌ ಚಿತ್ರ ಮುರಿಯಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಸದ್ಯಕ್ಕೆ ಪ್ರಭಾಸ್‌ ಅಭಿನಯದ ‘ಬಾಹುಬಲಿ 2’ ಚಿತ್ರ ಜಗತ್ತಿನಾದ್ಯಂತ 1700 ಕೋಟಿ ಕಲೆಕ್ಷನ್‌ ಸನಿಹಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ ಈ ಚಿತ್ರದ ಹಿಂದಿ ಅವತರಣಿಕೆಯೇ 500 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲಾಗಿ ನಿಂತಿರುವ ‘ಬಾಹುಬಲಿ’ ಚಿತ್ರದ ದಾಖಲೆಗಳನ್ನು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ 2.0 ಚಿತ್ರ ಅಳಿಸಿಹಾಕಲಿದೆಯಂತೆ.

ಹೌದು, ಕೆಲ ಸಿನಿ ಪಂಡಿತರು ಈಗಾಗಲೇ 2.0 ಚಿತ್ರದ ಸಕ್ಸಸ್‌ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಅವರ ಲೆಕ್ಕಾಚಾರದ ಪ್ರಕಾರ ಶಂಕರ್‌ ನಿರ್ದೇಶನದ 2.0 ಚಿತ್ರ ದೇಶಾದ್ಯಂತ ಒಟ್ಟು 7000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಇದಷ್ಟೇ ಅಲ್ಲದೆ 15 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿರುವುದು ಮತ್ತೊಂದು ವಿಶೇಷ.

ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಯಾದ ‘ಬಾಹುಬಲಿ 2’ ಚಿತ್ರ ದೇಶಾದ್ಯಂತ 6500 ಚಿತ್ರಮಂದಿರಗಳಲ್ಲಿ ತೆರೆ ಕಂಡು, 5 ಭಾಷೆಗಳಲ್ಲಿ ಡಬ್‌ ಆಗಿ ಪ್ರೇಕ್ಷಕರನ್ನು ರಂಜಿಸಿದೆ. ಭಾಷೆ ಹಾಗೂ ಚಿತ್ರಮಂದಿರಗಳ ಲೆಕ್ಕಾಚಾರದಲ್ಲಿ ಹೊಸ ದಾಖಲೆ ಬರೆಯಲು ಅಣಿಯಗಿರುವ 2.0 ಚಿತ್ರ, ಕಲೆಕ್ಷನ್‌ ವಿಚಾರದಲ್ಲಿಯೂ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಲ್ಲಿ ಓದಿ :-ಕನ್ನಡಕ್ಕೆ ಬಾಹುಬಲಿಯ ಬಲ್ಲಾಳದೇವ !!!

ಬಹುಕೋಟಿ ವೆಚ್ಚದ ‘2.0’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಿಮಗೆಲ್ಲ ಗೊತ್ತೇ ಇದೆ. ಸದ್ಯಕ್ಕೆ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ 26ರಂದು ತೆರೆಗೆ ಬರುವ ನಿರೀಕ್ಷೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…