ಸುದ್ದಿ

ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

22

ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ.

ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ ಉತ್ತಮವಾಗಿದೆ. ಸಂಸ್ಥೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಎಲ್ಲಾ ನೆಟ್ವರ್ಕ್ ಗಳಲ್ಲಿ ಬಿಎಸ್ಎನ್ಎಲ್ ವ್ಯಾಪಕ ಸೇವೆ ನೀಡುತ್ತಿದೆ ಎಂದು ಹೇಳಿದ್ದಾರೆ.

ದೂರಸಂಪರ್ಕ ವಲಯದಲ್ಲಿ ದರ ಸಮರದ ಪೈಪೋಟಿ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದ್ದು, ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ ತನ್ನ ಚಂದಾದಾರರಿಗಾಗಿ ಎರಡು ಹೊಸ ದೀರ್ಘಕಾಲೀನ ಪ್ರಿಪೇಡ್ ಯೋಜನೆಗಳನ್ನು ಪ್ರಾರಂಭಿಸಿದೆ.

ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದೆ. ಇತ್ತೀಚೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಅನಿಯಮಿತ ಉಚಿತ ಕರೆಗಳು, ಉಚಿತ ಡೇಟಾ ಸೇವೆ ನೀಡಲಾಗಿತ್ತು. ಸಂಸ್ಥೆಯ ಪ್ರತಿಯೊಂದು ಸೇವೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ