ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ.
ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ.
ಆ ಬಳಿಕ ಅಣ್ಣಾಮಲೈ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದ್ದು, ಡಿಎಂಕೆ ಪಕ್ಷದಿಂದ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ.