ಉಪಯುಕ್ತ ಮಾಹಿತಿ

ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಆನ್‌ಲೈನ್ ಮೂಲಕ ಪಡೆಯಬಹುದು ಹೇಗೆ..?ತಿಳಿಯಲು ಈ ಲೇಖನ ಓದಿ..

1027

ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕ ಕಲ್ಪಿಸಿ, ಬಯೋಮೆಟ್ರಿಕ್ ಪದ್ಧತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ ಎಂದರು. ಸಾರ್ವಜನಿಕರು ಪಡಿತರ ಚೀಟಿಯನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ಪೀಡ್ ಪೋಸ್ಟ್ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಸಚಿವರು ವಿವರಿಸಿದರು. ಸರ್ಕಾರ ಬಿಪಿಎಲ್ ಮತ್ತು ಎಪಿಎಲ್ ಬದಲಾಗಿ ಆದ್ಯತಾ ಮತ್ತು ಆದ್ಯತಾ ರಹಿತ ಕುಟುಂಬಗಳೆಂದು ಗುರ್ತಿಸಲಾಗಿದ್ದು, 1.20 ಲಕ್ಷ ರೂ. ಆದಾಯ ಮಿತಿ ಹೊಂದಿರು ವವರನ್ನು ಆದ್ಯತಾ ಕುಟುಂಬವೆಂದು, ಉಳಿದಂತೆ ಆದ್ಯತಾ ರಹಿತ ಕುಟುಂಬ ಎಂದು ಗುರುತಿಸಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮುಗಳಲ್ಲಿಯೂ ಬಯೋಮೆಟ್ರಿಕ್ ಅಳವಡಿಸಲಾಗುತ್ತಿದೆ. ಇದರಿಂದ ಗೋದಾ ಮುನಿಂದ ನ್ಯಾಯಬೆಲೆ ಅಂಗಡಿಗಳಿಗೆ ಎಷ್ಟು ಆಹಾರ ಪೂರೈಕೆಯಾಗಿದೆ. ನ್ಯಾಯಬೆಲೆ ಅಂಗಡಿಗಳಿಂದ ಎಷ್ಟರ ಮಟ್ಟಿಗೆ ಆಹಾರ ವಿತರಣೆಯಾಗಿದೆ ಎಂಬ ಮಾಹಿತಿ  ದೊರೆಯಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ ಹತ್ತೂವರೆ ಲಕ್ಷ ಬೋಗಸ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದರಿಂದ ನಕಲಿ ಕಾರ್ಡ್‌ಗಳಿಗೆ
ಅವಕಾಶವಿರುವುದಿಲ್ಲ ಎಂದರು. ಆದರೂ ಬೋಗಸ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ನೀಡಿದರೆ ಅಂತವರಿಗೆ 4೦೦ ರೂ., ಹಾಗೆಯೇ ಕಾಳಸಂತೆ ಆಹಾರ ಪತ್ತೆ ಹಚ್ಚುವವರಿಗೆ ಬಹುಮಾನ ನೀಡಲಾಗುವುದು ಎಂದು ಸಚಿವರು ನುಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸೌಲಭ್ಯಗಳು ಆದ್ಯತಾ ಹಾಗೂ ಆದ್ಯತಾ ರಹಿತ ಕುಟುಂಬಗಳಿಗೆ ತಲುಪಬೇಕು ಎಂದರು. ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ನೋಡಿಕೊಳ್ಳಲಾಗುವುದು.ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿದರೆ ಒಂದು ವಾರದಲ್ಲಿ ಪಡಿತರ ಚೀಟಿ ನೀಡಬೇಕು. ಈಗಾಗಲೇ ಈ ಪ್ರಕ್ರಿಯೆಯು ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ  ಆರಂಭಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.

ಎಲ್ಲಾ ಪಡಿತರ ಚೀಟಿಗೆ ಆಧಾರ್ ಜೋಡಣಾ ಕಾರ್ಯವು ನಡೆದಿದೆ. ಜಿಲ್ಲೆಯಲ್ಲಿ ಶೇ.50ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದರು. ಹಾಗೆಯೇ ಸಿರಿಧಾನ್ಯ ಬೆಳೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ರಾಗಿ ಮತ್ತು ಜೋಳ ಖರೀದಿ ಮಾಡಲಾಗುತ್ತಿದೆ. ಬೇಡಿಕೆ ಇರುವ ಕಡೆ ರಾಗಿ ಮತ್ತು ಜೋಳವನ್ನು ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲಾಗುವುದು ಎಂದರು.

ಮುಖ್ಯಮಂತ್ರಿ ಅವರ ಅನಿಲಭಾಗ್ಯ ಯೋಜನೆಯಡಿ ಫಲಾನುಭವಿಗಳ ಪಟ್ಟಿ ಪಡೆಯ ಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ  ಪಂಗಡ ಹಾಗೂ ಕಾರ್ಮಿಕರಿಗೆ ಈ ಸೌಲಭ್ಯ
ನೀಡಲಾಗುತ್ತದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ರಾಜಕೀಯ

    ಅಮಿತ್ ಶಾ, ಸಿ ಎಂ ಸಿದ್ದುಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.!ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ…

    ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಸುದ್ದಿ

    ಹೊರಬಿತ್ತು ರಾಮ ಸೇತುವಿನ ನಿಗೂಡ ರಹಸ್ಯ..!ಅಮೇರಿಕಾದ ನಾಸಾ ವಿಜ್ಞಾನಿಗಳು ಹೇಳಿದ ಸತ್ಯ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…