ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.
ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.
ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.
ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.
ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.
ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.