ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಅವರು ಸೋಮವಾರ ಜಿಲ್ಲಾದ್ಯಂತ ಸೆಕ್ಷನ್ 144 ಜಾರಿ ಮಾಡಿದ್ದರು. ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಪ್ರಕಟಣೆ ಹೊರಡಿಸಿದ್ದರು.ಅಲ್ಲದೆ ಪ್ರಕಟಣೆಯಲ್ಲಿ ತಿಳಿಸಿರುವ ಸಮಯದಲ್ಲಿ ಜಿಲ್ಲೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ.

ಎಂಎನ್‍ಆರ್‍ಇಜಿಎ ಕಾರ್ಯಕ್ರಮಗಳ ಅಡಿಯಲ್ಲಿ ಬೆಳಗ್ಗೆ 10.30ರ ಬಳಿಕ ಯಾವುದೇ ತೆರೆದ ಸ್ಥಳಗಳಲ್ಲಿ ಕಾರ್ಮಿಕರು ಕೆಲಸ ಮಾಡಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಅಷ್ಟೇ ಅಲ್ಲದೆ, ಜೂನ್ 22ರವರೆಗೆ ಬಿಹಾರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಮೂಲಕ ಬಿಸಿಲ ಝಳಕ್ಕೆ ಮೃತಪಡುವವರ ಸಂಖ್ಯೆ ತಗ್ಗಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.ಹಾಗೆಯೇ ಬಿಹಾರದ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಗಯಾದ ಅನುಗ್ರಹ ನಾರಾಯಣ ಮಗಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಅವರಿಗೆ ಸರ್ಕಾರದಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಸಿಲ ತಾಪಕ್ಕೆ ಬಲಿಯಾದ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರ ಧನವನ್ನು ಘೋಷಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಪ್ರತಿಕ್ರಿಯಿಸಿ, ಜನರು ಬಿಸಿಲಿಗೆ ಹೋಗುವುದಕ್ಕಿಂತ ನೆರಳು ಇರುವ ಪ್ರದೇಶದಲ್ಲಿ ಇರುವುದು ಸೂಕ್ತ. ಅತಿಯಾದ ಬಿಸಿಲ ತಾಪಕ್ಕೆ ಮನುಷ್ಯನ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಮೆದುಳು ಸಂಬಂಧಿ ರೋಗಗಳು ಬರುತ್ತವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…