ಸುದ್ದಿ

ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

By admin

October 01, 2019

ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು.

ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆ ಮೂಲಕ ಟೆಂಡರ್ ಕರೆದು ಮರಳು ಗಣಿಗಾರಿಕೆ ನಡೆಸಲು ತಾಲೂಕು ಸಮಿತಿ ಮೂಲಕ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಮರಳು ನೀತಿ ಅನುಕೂಲಕರವಾಗಿಲ್ಲದ ಕಾರಣ ಜನಸಾಮಾನ್ಯರಿಗೆ ಮರಳು ಸುಲಭವಾಗಿ ಸಿಗದಂತಾಗಿ ಮರಳಿನ ದರ ಗಗನಕ್ಕೇರಿತ್ತು ಎನ್ನಲಾಗಿದೆ.

ನಂತರ ಬಂದ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕೂಡ ಹೊಸ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿತ್ತು. ಆದರೆ, ಜಾರಿ ಸಾಧ್ಯವಾಗಿರಲಿಲ್ಲ. ಈಗ ಬಿಜೆಪಿ ಸರ್ಕಾರ ಹೊಸ ಮರಳು ನೀತಿ ಜಾರಿಗೆ ಮುಂದಾಗಿದ್ದು ಹೊರರಾಜ್ಯಗಳ ಮಾದರಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ನೂತನ ಮರಳು ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಸಚಿವ ಸಿ.ಸಿ. ಪಾಟೀಲ್ ಅವರು,

ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವ ರೀತಿಯಲ್ಲಿ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಅಂತೆಯೇ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.