ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್‌ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.
ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-
ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.
ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-
ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.
ಬೀಟ್ರೂಟ್ ಜ್ಯೂಸ್:-
ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ
ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-
ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.
ಬೀಟ್‍ರೂಟ್ ಫ್ರೈ:-
ಬೀಟ್‍ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್‍ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ
ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-
ಬೀಟ್‌ರೂಟ್‌ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್‌ರೂಟ್ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…