ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ.
ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16 ಮಿಗ್ರಾಂ. ಮೆಗ್ನೀಷಿಯಂ ಇರುತ್ತದೆ.
ಬೆಲ್ಲ ದೇಹದ ಉಷ್ಣತೆ ಕಾಪಾಡಲು ನೆರವಾಗುತ್ತದೆ. ಬೆಲ್ಲ ತಿಂದು ನೀರು ಕುಡಿಯುವುದರಿಂದ ಬೇಸಿಗೆಯಲ್ಲಿ ತಂಪು ನೀಡುತ್ತದೆ. ಬೆಲ್ಲದಲ್ಲಿ ಪೊಟ್ಯಾಷಿಯಂ ಮತ್ತು ಸೋಡಿಯಂ ಇರುವ ಕಾರಣ ದೇಹದಲ್ಲಿ ಆಮ್ಲೀಯ ತತ್ತ್ವಗಳನ್ನು ನಿಭಾಯಿಸುತ್ತದೆ. ಹೀಗಾಗಿ ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ.
ಬೆಲ್ಲವನ್ನು ನಿತ್ಯವೂ ಸೇವಿಸುವುದರಿಂದ ಆಸ್ತಮಾ ಬ್ರೋನಿಟಿಸ್ ಸಮಸ್ಯೆ ನಿವಾರಣೆಯಾಗಲಿದೆ. ಎಳ್ಳು ಬೆರೆಸಿ ಜೊತೆಗೆ ಸೇವಿಸಿದರೆ ಶ್ವಾಸಕೋಶಕ್ಕೆ ಉತ್ತಮ. ನಿಮಗೆ ಸಂಧಿ ನೋವಿದ್ದರೆ ಬೆಲ್ಲ ಉತ್ತಮ ನೋವು ನಿವಾರಕ. ಶುಂಠಿ ಜೊತೆ ಸೇರಿಸಿ ಬೆಲ್ಲ ತಿನ್ನಬಹುದು.
ತೂಕ ಇಳಿಸಲು ಬೆಲ್ಲ ಉತ್ತಮ ಹಾದಿ. ಪೊಟ್ಯಾಷಿಯಂ ಹೆಚ್ಚಾಗಿರುವ ಕಾರಣ ಎಲೆಕ್ಟ್ರೋಲೈಟ್‍ಗಳನ್ನು ಸಮತೋಲನ ಮಾಡಿ ಚಯಾಪಚಯ ಚೆನ್ನಾಗಿರಲು ಬೆಲ್ಲ ನೆರವಾಗುತ್ತದೆ. ಸಕ್ಕರೆ ಕಾರ್ಬೊಹೈಡ್ರೇಟ್ ದೇಹಕ್ಕೆ ಕೊಟ್ಟರೆ ಬೆಲ್ಲ ದೇಹಕ್ಕೆ ದೀರ್ಘಕಾಲದ ಶಕ್ತಿ ಕೊಡುತ್ತದೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಸುವುದಿಲ್ಲ. ಸುಸ್ತು ಮತ್ತು ನಿಶ್ಶಕ್ತಿ ಇರುವವರಿಗೆ ಉತ್ತಮ.