ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ ಜೂನ್‌ನಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದು ತಮ್ಮ ಸಮಸ್ಯೆ ವಿವರಿಸಿದ್ದರು.

ಅಲ್ಲದೇ 2018ರ ಸೆ.15ರಂದು ಪಿಎಂ ಟ್ವಿಟರ್ ಖಾತೆಗೆ ಸಮಸ್ಯೆ ಬರೆದು ಟ್ಯಾಗ್ ಮಾಡಿದ್ದರು. ಅದರ ಪ್ರತಿಫಲವಾಗಿ 2018ರ ಅ.1ರಂದು ರೂರಲ್ ಎಲೆಕ್ಟ್ರಿಕಲ್ ಕಾರ್ಪೊರೇಶನ್ ಲಿಮಿಟೆಡ್ ವತಿಯಿಂದ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಮರೇಶಗೆ ಉತ್ತರ ಬಂತು. ಕೇಂದ್ರ ಸರ್ಕಾರದ ಸೌಭಾಗ್ಯ ಯೋಜನೆಯಡಿ ಆಯ್ದ ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿರುವ ವಿಷಯವನ್ನು ಪತ್ರದಲ್ಲಿ ಉಲ್ಲೇಖೀಸಲಾಗಿತ್ತು.

ವಿದ್ಯುತ್ ಇಲ್ಲದೇ ಚಿಮಣಿ ಬೆಳಕಿನಲ್ಲಿ ಕಾಲ ಕಳೆಯುತ್ತಿದ್ದ ದೊಡ್ಡಿಗಳಿಗೆ ಈಗ ಬೆಳಕಿನ ಸೌಭಾಗ್ಯ ಬಂದಂತಾಗಿದೆ. ಜೆಸ್ಕಾಂ ವಿಭಾಗೀಯ ಕಚೇರಿ ಸಹಾಯಕ ಎಂಜಿನಿಯರ್ ಹಳ್ಳಿಗಳಿಗೆ ತೆರಳಿ ಸಮೀಕ್ಷೆ ನಡೆಸಿ ಅಂದಾಜು ಪಟ್ಟಿ ಸಿದ್ಧಪಡಿಸಿದ್ದರು. ಈಗಾಗಲೇ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳನ್ನು ಹಾಕಿದ್ದು, ಬಹುತೇಕ ಮನೆಗಳಿಗೆ ಮೀಟರ್ ಅಳವಡಿಸಲಾಗಿದೆ.ಜತೆಗೆ, ಟ್ರಾನ್ಸ್‌ಫಾರ್ಮರ್ ತರಲಾಗಿದ್ದು, ಒಂದೆರಡು ದಿನಗಳಲ್ಲಿ ಅಳವಡಿಸುವ ಸಾಧ್ಯತೆಯಿದೆ. ಇದು ಕೇವಲ ಮೂರು ದೊಡ್ಡಿಗಳಿಗೆ ಮಾತ್ರವಲ್ಲದೇ ಇನ್ನುಳಿದ ಹತ್ತಾರು ದೊಡ್ಡಿಗಳ ಭಾಗ್ಯದ ಬಾಗಿಲು ತೆರೆಸಿದೆ. ಜೆಸ್ಕಾಂ ಅಧಿಕಾರಿಗಳ ಮಾಹಿತಿ ಪ್ರಕಾರ 1,400 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ.

ತಮ್ಮ ದೊಡ್ಡಿಗಳಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಇಲ್ಲದ ಕಾರಣ ಮಾವನ ಮನೆಯಲ್ಲಿದ್ದು ಓದಿದ ಅಮರೇಶ, ಎಂಟೆಕ್ ಪದವಿ ಪಡೆದಿದ್ದಾರೆ. ಬಳಿಕ ಮುಂಬೈನಲ್ಲಿ ಕೆಲ ಕಾಲ ಉದ್ಯೋಗ ಮಾಡಿ ಈಗ ಪುನಃ ಊರು ಸೇರಿಕೊಂಡಿದ್ದಾರೆ. ಸ್ಥಳೀಯ ಮಟ್ಟದಲ್ಲಿ ತಮ್ಮ ದೊಡ್ಡಿಗಳ ಸಮಸ್ಯೆ ನೀಗದ ಕಾರಣ ಪ್ರಧಾನಿ ಕಚೇರಿಯ ಮೊರೆ ಹೋಗಿದ್ದಾರೆ. ಅವರ ಸಣ್ಣ ನಡೆ ಈಗ ದೊಡ್ಡಮಟ್ಟದ ಪ್ರತಿಫಲವನ್ನೇ ನೀಡಿದೆ.
ಅನೇಕ ದೊಡ್ಡಿಗಳಿಗೆ ತೆರಳಿ ಶುಲ್ಕ ಪಾವತಿಸಿದರೆ ವಿದ್ಯುತ್ ನೀಡುವುದಾಗಿ ನಾವು ಈ ಮೊದಲೂ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ಜನರು ಶುಲ್ಕ ಕಟ್ಟಲು ಮುಂದಾಗುತ್ತಿರಲಿಲ್ಲ. ಸೌಭಾಗ್ಯ ಯೋಜನೆಯಡಿ ವಿದ್ಯುತ್ ನೀಡುವಂತೆ ನಮಗೆ ನಿರ್ದೇಶನ ಬಂದ ಕಾರಣ ಆ ಮೂರು ದೊಡ್ಡಿಗಳ ಜತೆ ಇನ್ನೂ ಅನೇಕ ಕಡೆ ವಿದ್ಯುತ್ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ವಿದ್ಯುತ್ ಸರಬರಾಜು ಆರಂಭಿಸಲಾಗುವುದು. ಅಲ್ಲಿನ ನಿವಾಸಿಗಳು ಇನ್ನು ಮುಂದೆ ಸರಿಯಾಗಿ ವಿದ್ಯುತ್ ಬಿಲ್ ಪಾವತಿಸಿದರೆ ಸಾಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.