ಉಪಯುಕ್ತ ಮಾಹಿತಿ

ಬೆಳೆ ದರ್ಶಕ್-2020ಆಪ್

24

ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ.

ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ ಬೆಳೆ ದರ್ಶಕ್ -2020 ಆಪ್ ಮೂಲಕ ಅಪ್ಲೋಡ್ ಆದ ವಿವರ ಸರಿಯಾಗಿದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು.
ಒಂದು ವೇಳೆ ರೈತರಾಗಲಿ ಅಥವಾ ಖಾಸಗಿ ನಿವಾಸಿಗಳು ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿ ದಾಖಲಿಸಿದ್ದರೆ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಲು ಬೆಳೆ ದರ್ಶಕ್‍ನಲ್ಲಿ ಅವಕಾಶ ಕಲ್ಪಸಲಾಗಿದೆ. ಬೆಳೆ ಸಮೀಕ್ಷೆ ಪೂರ್ಣಗೊಳಿಸಲು ಸೆಪ್ಟಂಬರ್ 30 ಕೊನೆ ದಿನವಾಗಿದ್ದು, ಈಗಾಗಲೇ ಬೆಳೆ ದರ್ಶಕ್ ಆ್ಯಪ್ ಬಿಡುಗಡೆಗೊಳಿಸಿದ್ದು, ರೈತರು 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಸ್ವತಃ ಆ್ಯಪ್‍ನಲ್ಲಿ ವೀಕ್ಷಿಸಬಹುದಾಗಿದೆ.
ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಳ್ಳಲು ಗೂಗಲ್ ಪ್ಲೇ ಸ್ಟೋರ್‍ನಲ್ಲಿ ದೊರೆಯುವ ಬೆಳೆ ದರ್ಶಕ್ ಆ್ಯಪ್ 2020-21 ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

http://play.google.com/store/apps/details?id=com.crop.offcsreportskharif

ಈ ಲಿಂಕ್ ಬಳಸಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಹುದು.


ಆ್ಯಪ್‍ನ ವಿಶೇಷತೆ: ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರ ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ ಸಮಯದಲ್ಲಿ ಜಮೀನಿನಲ್ಲಿ ತೆಗೆದ ಜಿಪಿಎಸ್ ಆಧಾರಿತ ಛಾಯಾಚಿತ್ರ ವೀಕ್ಷಿಸಬಹುದು. ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ ಪಡೆಯಬಹುದು

ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿ ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಅಂಗೀಕರಿಸಿದ್ದಾರೋ, ಇಲ್ಲವೋ ಎಂದು ಷರಾ ಕಾಲಂನಲ್ಲಿ ತಿಳಿಯಬಹುದು. ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಆಕ್ಷೇಪಣೆ ಕುರಿತು ಏನು ಕ್ರಮ ಕೈಗೊಂಡಿದ್ದಾರೆ ಎಂದು ರೈತರು ತಿಳಿಯಬಹುದಾಗಿದೆ.
ಪ್ರಯೋಜನಗಳು: ಸದರಿ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆನಷ್ಟ ಪರಿಹಾರ, ಬೆಂಬಲ ಬೆಲೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುತ್ತದೆ. ಬೆಳೆ ಸಮೀಕ್ಷೆ ಕುರಿತಾದ ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ.

source whatsapp

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ