ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.
ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.
ಆ ಬಾಲಕ ಯಾರು ಗೊತ್ತಾ?
ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-
ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!
ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…
ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!
ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-
ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…