ಕಾನೂನು

ಭಾರತದಲ್ಲಿ ಇದೇ ಮೊದಲ ಬಾರಿಗೆ,ಕೋತಿಯನ್ನು ಹಿಂಸಿಸಿ ಕೊಂದ ಆರೋಪಿಗೆ ಬೇಲ್ ನಿರಾಕರಿಸಿದ ಕೋರ್ಟ್,ಆತನಿಗೆ ವಿಧಿಸಿದ ಶಿಕ್ಷೆ ಏನು ಗೊತ್ತಾ..?

1150

ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಾಣಿ ಹಿಂಸೆ ಪ್ರಕರಣದಲ್ಲಿ ಎರಡು ಬಾರಿ ಜಾಮೀನು ನಿರಾಕರಣೆಯಾಗಿರುವುದು ಭಾರತದಲ್ಲಿ ಇದೇ ಮೊದಲು ಎಂದು ವರದಿಯಾಗಿದೆ.

ಪ್ರಾಣಿಗಳ ಮೇಲೆ ಕ್ರೌರ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿರುವುದು ಕೂಡ ಭಾರತದಲ್ಲಿ ಇದೇ ಮೊದಲು ಎಂದು ಪೇಟಾದ ಎಮರ್ಜೆನ್ಸಿ ರೆಸ್ಪಾನ್ಸ್ ಕೋ-ಆರ್ಡಿನೇಟರ್ ಮೀಟ್ ಆಶರ್ ಹೇಳಿದ್ದಾರೆ.

ಕೊಲೆ ಪ್ರಕರಣಗಳಲ್ಲಿಯೂ ಕೂಡ ಸಾಮಾನ್ಯವಾಗಿ ಆರೋಪಿಗಳಿಗೆ 2-3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗುತ್ತದೆ. ಆದರೆ ಈ ಕೇಸಿನಲ್ಲಿ 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿರುವುದು ನಮಗೆ ಆಶ್ಚರ್ಯವಾಗಿದ್ದು, ವಕೀಲರಿಗೂ ಅಚ್ಚರಿಯಾಗಿದೆ ಎಂದು ತಿಳಿಸಿದರು.

ಸಾಮಾನ್ಯವಾಗಿ ಪ್ರಾಣಿ ಹಿಂಸೆ ಪ್ರಕರಣದಲ್ಲಿ ಆರೋಪಿ ಮೊದಲ ವಿಚಾರಣೆಯಲ್ಲಿ ಜಾಮೀನು ಪಡೆದು ಹೊರಬರುತ್ತಾರೆ. ಆದ್ರೆ ಈ ಪ್ರಕರಣ ಕೆಲವು ಅಂಶಗಳಿಂದ ಭಿನ್ನವಾಗಿದೆ. ಈ ಪ್ರಕರಣದಲ್ಲಿ ಪ್ರಾಣಿ ಯಾವುದೇ ಪ್ರಚೋದನೆ ಮಾಡದಿದ್ದರೂ ಅದನ್ನ ಹೊಡೆದು ಕೊಲ್ಲಲಾಗಿದೆ. ನಂತರವೂ ಅದಕ್ಕೆ ಹಿಂಸಿಸಲಾಗಿದೆ.

ಅಮಾನುಷವಾಗಿ ಮರಕ್ಕೆ ಕಟ್ಟಿ ಕೋತಿಯನ್ನು ಹೊಡೆದು ಕೊಂದ 23 ವರ್ಷದ ಯುವಕ ಸೇರಿದಂತೆ ಇಬ್ಬರು ಅಪ್ರಾಪ್ತರನ್ನು ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಪೊಲೀಸರು ಬಂಧಿಸಿದ್ದರು.ತೋಟಕ್ಕೆ ಬಂದಿದ್ದ ಕೋತಿಯನ್ನ ಮರಕ್ಕೆ ಹಗ್ಗದಿಂದ ಉಲ್ಟಾ ನೇತು ಹಾಕಿ ಮನಬಂದಂತೆ ಹೊಡೆದಿರೋದನ್ನ ವಿಡಿಯೋ ಮಾಡಿದ್ದರು.

ನಂತರ ಕೋತಿಯನ್ನ ಕೆಳಗಿಳಿಸಿ ಕೋಲಿನಿಂದ ಹೊಡೆದಿದ್ದು, ಏಟನ್ನ ಸಹಿಸಲಾಗದೇ ವಿಲವಿಲ ಒದ್ದಾಡಿ ಕೋತಿ ಪ್ರಾಣ ಬಿಟ್ಟಿತ್ತು. ಬಳಿಕ ವಿಡಿಯೋ ಮೂಲಕ ಅರಣ್ಯ ಅಧಿಕಾರಿಗಳು ಆರೋಪಿಗಳನ್ನ ಪತ್ತೆಹಚ್ಚಿ ಬಂಧಿಸಿದ್ದರು.

ಅರಣ್ಯ ಅಧಿಕಾರಿಗಳು ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 9ರಡಿ ದೂರು ದಾಖಲಿಸಿಕೊಂಡಿದ್ದರು. ಆರೋಪಿಯನ್ನ ಸ್ಥಳಿಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಆರೋಪಿಯ ದುಷ್ಕೃತ್ಯದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಆದ್ದರಿಂದ ಈ ಪ್ರಕರಣ ಬಗ್ಗೆ ಹೆಚ್ಚು ಗಮನ ಹರಿಸಲಾಗಿದೆ.

ಆರೋಪಿಯ ಮೊದಲ ಜಾಮೀನು ನಿರಾಕರಿಸಿದ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯ್ತು. ಮತ್ತೆ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದು, ಎರಡನೇ ಬಾರಿಯೂ ನ್ಯಾಯಾಧೀಶರು ಜಾಮೀನು ನಿರಾಕರಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ಉಪಯುಕ್ತ ಮಾಹಿತಿ

    ‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

    ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೃಷ್ಣ ಪರಮಾತ್ಮನ 80 ಮಕ್ಕಳ ಹೆಸರು ನಿಮಗೆ ತಿಳಿದಿತ್ತೆ? : ಇಲ್ಲಿದೆ ನೋಡಿ….

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….