ಸುದ್ದಿ

ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

By admin

August 08, 2019

ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ.

ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು.

ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ ಆಗಿರುವ ಮೊಯಿನ್-ಉಲ್-ಹಕ್ ಇನ್ನೂ ಅಧಿಕಾರ ಸ್ವೀಕರಿಸಬೇಕಿದ್ದು ಮುಂದೆ ಯಾವ ಪರಿಣಾಮ ಆಗಲಿದೆ ನೋಡಬೇಕಿದೆ.

ಕಾಶ್ಮೀರ ವಿಚಾರವಾಗಿ ವಿಶ್ವ ಸಂಸ್ಥೆ  ಮಧ್ಯ ಪ್ರವೇಶ ಮಾಡಬೇಕು ಎಂಬ ಮಾತನ್ನು ಪಾಕ್ ಹೇಳಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ  ಮನವಿ ಮಾಡಿ, ಕಾಶ್ಮೀರ ವಿಚಾರಕ್ಕೆ ಮಧ್ಯಸ್ಥಿಕೆ ವಹಿಸಲು ಕೇಳಿದ್ದು ಭಾರತ ಸಹಜವಾಗಿಯೇ ವಿರೋಧಿಸಿದೆ.