ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ:
ಲಿಂಗತ್ವ
ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 3 ಜನ ಆಯ್ದ ಪ್ರತಿನಿಧಿಗನ್ನು ಹೊಂದಿರಬೇಕು. ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿಯನ್ನು ನೀಡಲು ತಾಲೂಕು ಮಟ್ಟದ ಸಮಿತಿಯನ್ನು ರಚಿಸಲು ಸೂಚಿಸಿದ್ದು ಈ ಸಮಿತಿಯಲ್ಲಿ ಸಂಬಂಧಿತ ತಾಲೂಕಿನ ತಹಶೀಲ್ದಾರ್ ಅಧ್ಯಕ್ಷರಾಗಿದ್ದು, ತಾಲೂಕು ಮಟ್ಟದ ವೈದಾಧಿಕಾರಿ, ಸಮುದಾಯಾಧಾರಿತ ಪ್ರತಿನಿಧಿ (ಜಿಲ್ಲಾ ನಾಮ ನಿರ್ದೇಶಿತರಾದವರು), ಸಂಬಂಧಿತ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸದಸ್ಯರಾಗಿರುತ್ತಾರೆ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿಯು ಅತ್ಯಂತ ಪ್ರಮುಖವಾದ ದಾಖಲೆಯಾಗಿದ್ದು, ಇದನ್ನು ಆಧಾರವಾಗಿಟ್ಟುಕೊಂಡು ಇತರ ಸೌಲಭ್ಯಗಳಿಗೆ ಅಗತ್ಯವಾದ ಪಡಿತರ ಚೀಟಿ, ಆಧಾರ್ ಕಾರ್ಡ್‍ಗಳನ್ನು ಕೂಡಾ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಕೋಶ/ಸಮಿತಿ:
ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಕೋಶ/ಸಮಿತಿಯಲ್ಲಿ ದಮನಿತ ಮಹಿಳೆಯರ ನಿಸ್ಸಹಾಯಕತೆಯನ್ನು ಹೋಗಲಾಡಿಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಲು 21 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ತಿಳಿಸಿದರು. ವಿವಿಧ ಕಡೆಗಳಲ್ಲಿರುವ ದಮನಿತ ಮಹಿಳೆಯರನ್ನು ಗುರುತಿಸಿ ಅವರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಚೇತನಾ ಮಹಿಳಾ ಸಂಘವನ್ನು ಸಮುದಾಯಾಧಾರಿತ ಸಂಸ್ಥೆಯಾಗಿ ಆಯ್ಕೆ ಮಡಿದ್ದು, ಸದ್ರಿ ಸಂಸ್ಥೆಯು ಪ್ರಸ್ತುತ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸದೇ ಇರುವುದರಿಂದ ಹಿಂದ್ ಕುಷ್ಟ್ ನಿವಾರಣ್ ಸಂಘ ಇವರನ್ನು ಆಯ್ಕೆ ಮಾಡುವಂತೆ ಪ್ರಧಾನ ಕಛೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಪೊಲೀಸ್ ಆಯುಕ್ತರ ಪರವಾಗಿ ಅಮಣಿ, ಮಹಿಳಾ ಪೊಲೀಸ್ ಸಬ್‍ಇನ್ಸ್ಪೆಕ್ಟರ್, ಮಂಗಳೂರು, ಪೊಲೀಸ್ ಅಧಿಕ್ಷಕರ ಪರವಾಗಿ, ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಡಾI ಸಿಕಂದರ್ ಪಾಶಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ, ಡಾI ರಾಜೇಶ್ವರಿ, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು, ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಕೋಶ, ಮಂಗಳೂರು, ಉಪನಿರ್ದೇಶಕರು, ಸಆರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಂಗಳೂರು, ರೆನ್ನಿ ಡಿಸೋಜ, ಅಧ್ಯಕ್ಷರು ಮಕ್ಕಳ ಕಲ್ಯಾಣ ಸಮಿತಿ, ಮಂಗಳೂರು, ನವಸಹಜ ಸಮುದಾಯ ಸಂಘಟನೆಯ ಪ್ರತಿನಿಧಿಗಳು, ಪರಿವರ್ತನಾ ಚಾರಿಟೇಬಲ್ ಟ್ರಸ್ಟ್‍ನ ಪ್ರತಿನಿಧಿಗಳು ಹಾಗೂ ಹಿಂದ್ ಕುಷ್ಟ್ ನಿವಾರಣ್ ಸಂಘದ ಪ್ರತಿನಿಧಿಗಳು ಹಾಜರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…