ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ
ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು ಆರೋಪಗಳನ್ನು ಮಾಡಲಾಗಿದೆ. ಆದರಿಂದ ಸರ್ಕಾರದಿಂದ ಅಥವಾ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಅಧಿಕೃತಗೊಳಿಸದ ಯಾವುದೇ ಏಜೆನ್ಸಿಯ ಯಾವುದೇ ಚಟುವಟಿಕೆಗಳನ್ನು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವರೆಗೆ ಜಿಲ್ಲೆಯಲ್ಲಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಮತದಾರರ ಹಾಗೂ ವೈಯಕ್ತಿಕ ಡಾಟಾವನ್ನು ಸುರಕ್ಷಿತವಾಗಿರಿಸಲು ಯಾವುದೇ ಮಾಧ್ಯಮದ ಮೂಲಕ ಯಾವುದೇ ರೀತಿಯ ನೇರ ಸಮೀಕ್ಷೆಗಳಲ್ಲಿ ಭಾಗಿಯಾಗುವ ಸಂಸ್ಥೆ/ವ್ಯಕ್ತಿಗಳ ವಿರುದ್ದ ಐ.ಪಿ.ಸಿ ಸೆಕ್ಷನ್ 188 ರಡಿಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳವುದಾಗಿ ಆದೇಶದಲ್ಲಿ ಎಚ್ಚರಿಸಲಾಗಿದೆ. ಸಾರ್ವಜನಿಕರು ಅಂತಹ ಚಟುವಟಿಕೆಗಳ ಬಗ್ಗೆ ಯಾವುದೇ ಕುಂದುಕೊರತೆ ಇದ್ದಲ್ಲಿ ಸಾಕ್ಷಿ ಆಧಾರಗಳೊಂದಿಗೆ ದೂರನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿಯ ಟೋಲ್ ಫ್ರೀ ಸಂಖ್ಯೆ: 08152-1950 ಮೂಲಕ ತಿಳಿಸಬಹುದು ಹಾಗೂ ಸಾರ್ವಜನಿಕರು ಭಾರತ ಚುನಾವಣಾ ಆಯೋಗದ ಅನುಮೋದಿತ ತಂತ್ರಾAಶಗಳ ಮೂಲಕ ಮಾತ್ರವೇ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿ ಅಥವಾ ಅವರಿಂದ ನೇಮಿಸಲಾದ ಅಧಿಕೃತ ಅಧಿಕಾರಿಗಳಿಗೆ ಮತ್ತು ಬಿ.ಎಲ್.ಓ/ಮತಗಟ್ಟೆ ಹಂತದ ಅಧಿಕಾರಿಗಳಿಗೆ ಮಾತ್ರ ತಮ್ಮ ವೈಯಕ್ತಿಕ ಅಥವಾ ಮತದಾರರ ಮಾಹಿತಿಯನ್ನು ಹಂಚಿಕೊಳ್ಳುವಂತೆ ಸಾರ್ವಜನಿಕರಿಗೆ ಕೋಲಾರಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.