ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..?
ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..?
ವಿವಿಪ್ಯಾಟ್ ಅಂದ್ರೆ ಏನು..?
ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು.
ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ ಮತದಾರರು ತಾವು ವೋಟ್ ಮಾಡಿದ ಪಕ್ಷ ಅಥವಾ ಯಾವ ಅಭ್ಯರ್ಥಿಗೆ ವೋಟ್ ಮಾಡಿದ್ದೇವೆಂದು ಖಾತರಿಪಡಿಸಕೊಳ್ಳಬಹುದು.
ವಿವಿಪ್ಯಾಟ್ ಹೇಗೆ ಕೆಲಸ ಮಾಡುತ್ತೆ..?
ಮತದಾರ ತಾನು ಆಯ್ಕೆ ಮಾಡಬೇಕಿರುವ ವ್ಯಕ್ತಿಯ ಹೆಸರಿನ ಮುಂದಿನ ಗುಂಡಿ ಒತ್ತಿದರೆ ಸಾಕು ಮತಯಂತ್ರದ ಪಕ್ಕದಲ್ಲಿಯೇ ಇಡಲಾಗುವ ಮತ ಖಾತರಿಪಡಿಸುವ ವೋಟರ್ ವೆರಿಫೈಡ್ ಪೇಪರ್ ಆಡಿಟ್ (ವಿವಿ ಪ್ಯಾಟ್) ಯಂತ್ರದಲ್ಲಿ ನಾವು ಮತ ಹಾಕಿದ ಅಭ್ಯರ್ಥಿಯ ಹೆಸರಿನಲ್ಲಿ ಪ್ರಿಂಟ್ ಆದ ಚೀಟಿ ಮತದಾನದ ಪೆಟ್ಟಿಗೆಯಲ್ಲಿ ಬೀಳುತ್ತದೆ. ಆಗ ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳಬಹುದು.