ಸಿನಿಮಾ

ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

377

ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ.

ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ ದಿನವೇ ಗರ್ಭಿಣಿಯಾಗಿರುವುದು ನನಗೆ ತಿಳಿಯಿತು. ಶೀಘ್ರವೇ ನಮ್ಮ ಮಗುವಿನೊಂದಿಗೆ ನಿಮ್ಮ ಎದುರು ಕಾಣಿಸಿಕೊಳ್ಳುತ್ತೇವೆ ಎಂದು ಅವರು ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಆಮಿ ಜಾಕ್ಸನ್ ಮದುವೆಗೆ ಮೊದಲೇ ಗರ್ಭಿಣಿಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಹಾಲಿವುಡ್ ಮೂಲದ ನಟಿ ಅಮಿ ಜಾಕ್ಸನ್ ಭಾರತದಲ್ಲಿ ಬಹುಭಾಷಾ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ‘ದಿ ವಿಲನ್’ ತಮಿಳಿನ ‘ಐ’, ‘2.0’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಆಮಿ 2019 ಜನವರಿ 1 ರಂದು ತಮ್ಮ ಬಾಯ್ ಫ್ರೆಂಡ್ ಜಾರ್ಜ್ ಪನಯೌಟು ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ತಿಳಿಸಿದ್ದರು. ಇದೀಗ ತಾವು ಗರ್ಭಿಣಿ ಎಂದು ಹೇಳಿಕೊಳ್ಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಈ ಜೋಡಿ 2020ಕ್ಕೆ ದಾಂಪತ್ಯಕ್ಕೆ ಕಾಲಿಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಆದರೆ, ದಿಢೀರ್ ಆಗಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಅದೃಷ್ಟ ಎನ್ನುವಂತೆ ತಾಯಂದಿರ ದಿನವೇ ನಾನು ಗರ್ಭಿಣಿಯಾಗಿರುವುದು ನನಗೆ ತಿಳಿದು ಬಂದಿದೆ. ಆದಷ್ಟು ಬೇಗ ನಮ್ಮ ಬೇಬಿಯೊಂದಿಗೆ ನಿಮ್ಮ ಎದುರು ಬರುತ್ತೇವೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ