ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ.

ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ ಮಾಸ್ಕ್ ಹಾಕಿಕೊಳ್ಳುವುದು ಕಾಮನ್ಆಗಿ ಬಿಟ್ಟಿದೆ. ಆದರೆ, ಉತ್ತರ ಪ್ರದೇಶದಲ್ಲಿದೇವರೇ ಮಾಸ್ಕ್ ಹಾಕಿಕೊಂಡು ಭಕ್ತರಿಗೆ ದರ್ಶನ ಕೊಡುತ್ತಿದ್ದಾನೆ.

ದೇವರ ದರ್ಶನಕ್ಕೆ ಬರುವ ಭಕ್ತರಿಗೆ ದೇವರ ಮುಖವೇ ಕಾಣುತ್ತಿಲ್ಲ. ಏಕೆಂದರೆ ದೇವರ ಮುಖಕ್ಕೆ ಇಲ್ಲಿ ಅರ್ಚಕರು ಮಾಸ್ಕ್ ಹಾಕಿ ಕೂರಿಸಿದ್ದಾರೆ. ಶಿವ-ಪಾರ್ವತಿ, ದುರ್ಗಾದೇವಿ ಹಾಗೂ ಸಾಯಿ ಬಾಬಾ ದೇವರ ವಿಗ್ರಹಗಳ ಮುಖಕ್ಕೆ ಮಾಸ್ಕ್ ಹಾಕಲಾಗಿದೆ.ವಾಯುಮಾಲಿನ್ಯ ಹೆಚ್ಚಾಗಿದ್ದಕ್ಕೆ ಈಗ ಶಿವ-ಪಾರ್ವತಿ ಮುಖಕ್ಕೆ ಮಾಸ್ಕ್ ಹಾಕಿದ್ದು ಎಲ್ಲರಿಗೂ ಗೊತ್ತಿದೆ.

ಆದರೆ, ಚಳಿಗಾಲದಲ್ಲಿ ಇದೇ ಶಿವ-ಪಾರ್ವತಿ ವಿಗ್ರಹಗಳಿಗೆ ಸ್ವಟರ್ ತೊಡಿಸಲಾಗುತ್ತದೆ ಎಂದುಸ್ವತಃ ದೇಗುಲದ ಮುಖ್ಯ ಅರ್ಚಕರೇ ತಿಳಿಸಿದ್ದಾರೆ. ಇಲ್ಲಿ ದೇವರನ್ನು ಮನುಷ್ಯರಂತೆ ನೋಡಿಕೊಳ್ಳಲಾಗುತ್ತದೆ. ಚಳಿಗಾಲದಲ್ಲಿ ವಿಗ್ರಹಗಳಿಗೆ ಸ್ವಟರ್ ಗಳನ್ನು ತೊಡಿಸಲಾಗುತ್ತದೆ. ಈಗ ಪರಿಸರದಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದಕ್ಕೆ, ದೇವರ ಮುಖಕ್ಕೆ ಮಾಸ್ಕ್ ಹಾಕಲಾಗುತ್ತಿದೆ ಎಂದು ಅರ್ಚಕರು ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….