ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ.
ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ ಮಾಸ್ಕ್ ಹಾಕಿಕೊಳ್ಳುವುದು ಕಾಮನ್ಆಗಿ ಬಿಟ್ಟಿದೆ. ಆದರೆ, ಉತ್ತರ ಪ್ರದೇಶದಲ್ಲಿದೇವರೇ ಮಾಸ್ಕ್ ಹಾಕಿಕೊಂಡು ಭಕ್ತರಿಗೆ ದರ್ಶನ ಕೊಡುತ್ತಿದ್ದಾನೆ.
ದೇವರ ದರ್ಶನಕ್ಕೆ ಬರುವ ಭಕ್ತರಿಗೆ ದೇವರ ಮುಖವೇ ಕಾಣುತ್ತಿಲ್ಲ. ಏಕೆಂದರೆ ದೇವರ ಮುಖಕ್ಕೆ ಇಲ್ಲಿ ಅರ್ಚಕರು ಮಾಸ್ಕ್ ಹಾಕಿ ಕೂರಿಸಿದ್ದಾರೆ. ಶಿವ-ಪಾರ್ವತಿ, ದುರ್ಗಾದೇವಿ ಹಾಗೂ ಸಾಯಿ ಬಾಬಾ ದೇವರ ವಿಗ್ರಹಗಳ ಮುಖಕ್ಕೆ ಮಾಸ್ಕ್ ಹಾಕಲಾಗಿದೆ.ವಾಯುಮಾಲಿನ್ಯ ಹೆಚ್ಚಾಗಿದ್ದಕ್ಕೆ ಈಗ ಶಿವ-ಪಾರ್ವತಿ ಮುಖಕ್ಕೆ ಮಾಸ್ಕ್ ಹಾಕಿದ್ದು ಎಲ್ಲರಿಗೂ ಗೊತ್ತಿದೆ.
ಆದರೆ, ಚಳಿಗಾಲದಲ್ಲಿ ಇದೇ ಶಿವ-ಪಾರ್ವತಿ ವಿಗ್ರಹಗಳಿಗೆ ಸ್ವಟರ್ ತೊಡಿಸಲಾಗುತ್ತದೆ ಎಂದುಸ್ವತಃ ದೇಗುಲದ ಮುಖ್ಯ ಅರ್ಚಕರೇ ತಿಳಿಸಿದ್ದಾರೆ. ಇಲ್ಲಿ ದೇವರನ್ನು ಮನುಷ್ಯರಂತೆ ನೋಡಿಕೊಳ್ಳಲಾಗುತ್ತದೆ. ಚಳಿಗಾಲದಲ್ಲಿ ವಿಗ್ರಹಗಳಿಗೆ ಸ್ವಟರ್ ಗಳನ್ನು ತೊಡಿಸಲಾಗುತ್ತದೆ. ಈಗ ಪರಿಸರದಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದಕ್ಕೆ, ದೇವರ ಮುಖಕ್ಕೆ ಮಾಸ್ಕ್ ಹಾಕಲಾಗುತ್ತಿದೆ ಎಂದು ಅರ್ಚಕರು ಹೇಳುತ್ತಿದ್ದಾರೆ.