ಸುದ್ದಿ

ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

20

ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು.

ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ ಧರಿಸಿಕೊಂಡು ಬಂದೆ ಎಂದು ಪವಿತ್ರಾ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಕಾಲೇಜು ವಿದ್ಯಾರ್ಥಿನಿ ಸುಮತಿ ಮನೆಗೆ ವಾಪಸ್ಸಾಗಿ ಬೇರೆ ಬಟ್ಟೆ ಧರಿಸಿ ಆರ್‌ಟಿಓ ಕಚೇರಿಗೆ ಬಂದಿದ್ದರು. ಅಂದು ಸುಮತಿ ಬರ್ಮುಡಾ ಹಾಗೂ ಶರ್ಟ್ ಧರಿಸಿದ್ದರು. ಹೀಗಾಗಿ ಮತ್ತೆ ಮನೆಗೆ ತೆರಳಿ ನಿಯತ್ತಾದ ಡ್ರೆಸ್ ಧರಿಸಿ ಬಂದಿದ್ದರು. ಇದಕ್ಕೂ ಮೊದಲು ಡ್ರೆಸ್ ಕುರಿತಂತೆ ಸುಮತಿ ಹಾಗೂ ಇನ್ಸ್ ಪೆಕ್ಟರ್ ಮಧ್ಯೆ ವಾಗ್ವಾದ ನಡೆದಿತ್ತು. ಇವರಿಬ್ಬರ ಜಗಳ ತಾರಕಕ್ಕೇರುತ್ತಿದ್ದಂತೆಯೇ ಇನ್ಸ್ ಸ್ಪೆಕ್ಟರ್ ಸಹೋದ್ಯೋಗಿಗಳು ಸ್ಥಳದಲ್ಲಿ ಜಮಾಯಿಸಿ ಸಮಜಾಯಿಷಿ ನೀಡಿದ್ದಾರೆ.

ಲೈಸೆನ್ಸ್ ಸಿಗುವ ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳಲು ನನಗೆ ಇಷ್ಟವಿರಲಿಲ್ಲ. ಹೀಗಾಗಿ ನಾನು ಮತ್ತೆ ಮನೆಗೆ ತೆರಳಿ ಬಟ್ಟೆ ಬದಲಾಯಿಸಿಕೊಂಡು ಬಂದೆ ಎಂದು ಸುಮತಿ ತಿಳಿಸಿದ್ದಾರೆ.ಈ ಬಗ್ಗೆ ವಕೀಲ ವಿ. ಎಸ್ ಸುರೇಶ್ ಮಾತನಾಡಿ, ಡ್ರೈವಿಂಗ್ ಟೆಸ್ಟ್ ಗೆ ಇಂತದ್ದೇ ಡ್ರೆಸ್ ಹಾಕಿಕೊಂಡು ಬರಬೇಕೆಂಬ ನಿಯಮ ಕಾನೂನಿನಲ್ಲಿ ಇಲ್ಲ. ಆದರೆ ಲೈಸೆನ್ಸ್ ಸಿಗಬೇಕಾದರೆ ವ್ಯಕ್ತಿಗೆ 18 ವರ್ಷ ಆಗಿರಬೇಕು ಅಷ್ಟೇ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

    ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.