ಉಪಯುಕ್ತ ಮಾಹಿತಿ

ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

949

ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿಯನ್ನು ನವೆಂಬರ್ ತಿಂಗಳ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವುದಾಗಿ ಅವರು ಹೇಳಿದ್ದಾರೆ.

ರೈಲ್ವೆ ಸಚಿವ ಪಿಯೂಸ್ ಗೋಯಲ್ ಅವರ ನಿರ್ದೇಶನದಂತೆ ರೈಲುಗಳ ಪರಿಸ್ಕೃತ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಎಲ್ಲಾ ಜನಪ್ರಿಯ ರೈಲುಗಳ ಪ್ರಯಾಣದ ಅವಧಿಯನ್ನು ಕನಿಷ್ಠ 15 ನಿಮಿಷದಿಂದ ಎರಡು ಗಂಟೆಗಳವರೆಗೆ ಕಡಿತಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿಯಲ್ಲಿ ಪ್ರತಿ ರೈಲ್ವಿ ವಿಭಾಗಕ್ಕೂ ನಿರ್ವಹಣೆ ಕಾರ್ಯಗಳಿಗೆ ಎರಡರಿಂದ ನಾಲ್ಕು ಗಂಟೆಗಳ ಸಮಯ ನೀಡಲಾಗಿದೆ.

ಹೊಸ ವೇಳಾಪಟ್ಟಿಯಲ್ಲಿ ದೇಶಾದ್ಯಂತ ಸುಮಾರು 500 ರೈಲುಗಳ ಪ್ರಯಾಣದ ಅವಧಿ ಕಡಿತಗೊಳ್ಳುತ್ತಿದ್ದು, ಭೋಪಾಲ್-ಜೋಧ್ ಪುರ್ ಎಕ್ಸ್ ಪ್ರೆಸ್ ರೈಲು 95 ನಿಮಿಷ ಮುಂಚಿತವಾಗಿ ತಲುಪಲಿದೆ.

ಇನ್ನು 2,330 ಕಿ.ಮೀ.ಸಂಚರಿಸುವ ಗುವಾಹತಿ-ಇಂದೋರ್ ವಿಶೇಷ ರೈಲು 115 ನಿಮಿಷ ಮುಂಚಿತವಾಗಿ ತಲುಪಲಿದೆ.

ಹೀಗೆ ಭಾರತಿಯ ರೈಲುಗಳು ವೇಗವಾಗಿ ಓಡಲಿವೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ಜ್ಯೋತಿಷ್ಯ

    ನಿಂಬೆ ಹಣ್ಣು ಮತ್ತು ಹಸಿ ಮೆಣಸಿನಕಾಯಿಯನ್ನು ಮನೆ ಮುಂದೆ ಮತ್ತು ವಾಹನಗಳ ಮುಂದೆ ಕಟ್ಟುವುದು ಏಕೆ ಗೊತ್ತಾ..?

    ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…

  • ಸಿನಿಮಾ

    ಮತದಾನ ಮಾಡದ ಸಿಟಿ ಮಂದಿಗೆ ಬೆಂಡೆತ್ತಿದ ಜಗ್ಗೇಶ್ ಆಕ್ರೋಶದಿಂದ ಹೇಳಿದ್ದೇನು ಗೊತ್ತಾ..?

    ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…