ಸುದ್ದಿ

ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

32

ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ.

1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.

 ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ.

1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ ಮದನ್ ಲಾಲ್ ಖುರಾನ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ