ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ
ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು.

ಈ ವೇಳೆ ಸ್ವಯಂಚಾಲಿತವಾಗಿ ಬಾಗಿಲು ಮುಚ್ಚಿಕೊಂಡಾಗ ಮಗುವಿನ ಕಾಲು ಬಾಗಿಲಿನ ನಡುವೆ ಸಿಕ್ಕಿಹಾಕಿಕೊಂಡಿತು. ರೈಲು ಹೊರಟಿದ್ದರಿಂದ ದಂಪತಿ ಹಾಗೂ ಸುತ್ತಮುತ್ತಲಿದ್ದ ಪ್ರಯಾಣಿಕರು ಆತಂಕಕ್ಕೊಳಗಾಗಿ ಸಹಾಯ ಮಾಡಲು ಎಲ್ಲರು ಆಕೆಗೆ ನೆರೆವು ನೀಡಿದರು . ಅಷ್ಟರಲ್ಲೇ ದಂಪತಿ ಮಗುವಿನ ಕಾಲನ್ನು ಒಳಕ್ಕೆ ಎಳೆದುಕೊಂಡರು.ಆದರೆ, ಲೋಕೊ ಪೈಲಟ್‌ಗೆ ಮಾಹಿತಿ ತಿಳಿದು ರೈಲು ಸಂಚಾರ ಸ್ಥಗಿತಗೊಳಿಸಿದ್ದರಿಂದ ಸೇವೆಯಲ್ಲಿ ವ್ಯತ್ಯಾಸವಾಯಿತು.5-7 ನಿಮಿಷಗಳ ಕಾಲ ಸಂಚಾರದಲ್ಲಿ ವ್ಯತ್ಯಯವಾಗಿದೆ. ಎರಡು ಟ್ರಿಪ್‌ಗಳು ಕಡಿತವಾಗಿವೆ ಎಂದು ಮೂಲಗಳು ತಿಳಿಸಿವೆ.

‘‘ಮೆಜೆಸ್ಟಿಕ್ ನಿಲ್ದಾಣದಲ್ಲಿ ದಟ್ಟಣೆ ಅಧಿಕವಾಗಿತ್ತು. ರೈಲು ಬಂದು ನಿಂತಾಗ ಒಳಗೆ ಹೋಗುವಂತೆ ಸಿಬ್ಬಂದಿ ಸೂಚನೆ ನೀಡಿದರು. ಮೂರು ವರ್ಷದ ಮಗು ಅಪ್ಪ, ಅಮ್ಮನೊಂದಿಗೆ ಒಳಗೆ ಪ್ರವೇಶಿಸಿದಳು. ಸ್ವಯಂಚಾಲಿತವಾಗಿ ಮುಚ್ಚಿಕೊಂಡ ಬಾಗಿಲಲ್ಲಿ ಬಾಲಕಿಯ ಕಾಲು ಸಿಲುಕಿತು. ಅದನ್ನು ಎಳೆದುಕೊಳ್ಳುವಲ್ಲಿ ದಂಪತಿ ಯಶಸ್ವಿಯಾದರು,’’ಎಂದು ಪ್ರತ್ಯಕ್ಷದರ್ಶಿ ಮುಕ್ತಿಯಾರ್ ವಿವರಿಸಿದರು.

ಅ.19 ರಂದು ರಾತ್ರಿ 8.32 ಕ್ಕೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಪ್ಲಾಟ್‌ಫಾರಂ ಹಾಗೂ ರೈಲಿನ ನಡುವೆ ಸಿಕ್ಕಿ ಹಾಕಿಕೊಂಡಿದ್ದ ಘಟನೆ ನಡೆದಿದೆ. ರೈಲು ಹಾಗೂ ಪ್ಲಾಟ್‌ಫಾರಂ ನಡುವೆ ಅಂತರವಿದ್ದು, ಇದರಲ್ಲಿ ಮಹಿಳೆಯು ಸಿಕ್ಕಿಹಾಕಿಕೊಂಡಿದ್ದು . ಲೋಕೊ ಪೈಲಟ್ ಕೂಡಲೇ ಇದನ್ನು ಗಮನಿಸಿದ್ದರಿಂದ ಮೆಟ್ರೋನ ಬಾಗಿಲು ಮುಚ್ಚಲಿಲ್ಲ. ನಂತರ ಸಹಾಯಕ್ಕೆ ಬಂದ ಸಿಬ್ಬಂದಿ ಹಾಗೂ ಪ್ರಯಾಣಿಕರು ಆಕೆಗೆ ಸಹಾಯ ಮಾಡಿದರು . ಈ ವೇಳೆ ಸುರಕ್ಷತಾ ಕ್ರಮವಾಗಿ ಥರ್ಡ್ ರೇಲ್‌ನಲ್ಲಿ ಹರಿಯುವ ವಿದ್ಯುತ್ ಬಂದ್ ಮಾಡಲಾಗಿತ್ತು.8.36ಕ್ಕೆ ವಿದ್ಯುತ್ ಪೂರೈಕೆಯನ್ನು ಸರಿಪಡಿಸಿ ರೈಲು ಕಾರ್ಯಾಚರಣೆ ಗೊಳಿಸಲಾಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…