ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರದಂದು ನಡೆದ ರಾಜ್ಯ ಆರೋಗ್ಯ ಇಲಾಖೆಯ ಸಭೆ ವೇಳೆ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಮಕ್ಕಳು ಮೆದುಳು ಜ್ವರದಿಂದ ಸಾವನ್ನಪ್ಪುತ್ತಿರುವುದರ ಬಗ್ಗೆ ಮಾತನಾಡುವ ಬದಲು ಕ್ರಿಕೆಟ್ ಪಂದ್ಯದ ಕುರಿತು ಪ್ರಶ್ನಿಸುತ್ತಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುದಕ್ಕೆ ಉದಾಹರಣೆಯಾಗಿದೆ. ‘ಕ್ರಿಕೆಟ್ ಪಂದ್ಯದ ಫಲಿತಾಂಶ ಏನಾಯ್ತು?’ ಎಂದು ಸಚಿವರು ಪ್ರಶ್ನಿಸುತ್ತಿರುವುದು ಮತ್ತು ಮತ್ತೊಬ್ಬ ವ್ಯಕ್ತಿ `4ನೇ ವಿಕೆಟ್ ಹೊಗಿದೆ’ ಎಂದು ಸಭೆಯಲ್ಲಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಕ್ಕಳ ಸಾವಿನ ಕುರಿತು ರಾಜ್ಯದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಸಚಿವರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತೂಕಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಬಗ್ಗೆ ಚೌಬೆ ಅವರು ಸ್ಪಷ್ಟಿಕರಿಸಿ, ‘ನಾನು ನಿದ್ರಿಸುತ್ತಿರಲಿಲ್ಲ, ಪತ್ರಿಕಾಗೋಷ್ಠಿ ಬಗ್ಗೆ ಯೋಚಿಸುತ್ತಿದ್ದೆ’ ಎಂದು ಹೇಳಿದ್ದರು. ಆ ಬಳಿಕ ಸೋಮವಾರ ಸ್ವತಃ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೇ, ಸಾವಿನ ಬಗ್ಗೆ ಪ್ರತಿದಿನ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದರು.
ಆಸ್ಪತ್ರೆಗೆ ದಾಖಲಾಗಿರುವವರು, ನೀಡಲಾಗುತ್ತಿರುವ ಚಿಕಿತ್ಸೆ, ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರ, ನೆರವುಗಳ ಕುರಿತು ವರದಿ ಸಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗ ಆರೋಗ್ಯ ಸಚಿವಾಲಯಕ್ಕೆ ಕೇಳಿದೆ. ಹಾಗೆಯೇ ಈ ಬಗ್ಗೆ ನಾಲ್ಕು ವಾರದೊಳಗೆ ಉತ್ತರ ನೀಡುವಂತೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.