ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ. ಮೂರು ಸಾವಿರ ಕೋಳಿಗಳುಳ್ಳ ಈ ಫಾರಂನಲ್ಲಿ ಎಂದಿನಂತೆ ಕೆಲಸಗಾರರು ಮೊಟ್ಟೆ ಸಂಗ್ರಹಿಸುತ್ತಿದ್ದಾಗ ಅಚ್ಚರಿಯೊಂದು ಕಾದಿತ್ತು.
ರೈತನೊಬ್ಬ ಪ್ರಕೃತಿ ವೈಚಿತ್ರ್ಯ ನೋಡಿ ಬೆರಗಾಗಿದ್ದಾನೆ. ಕೇರ್ನ್ಸ್ ನಲ್ಲಿರೋ ಸ್ಟಾಕ್ ಮ್ಯಾನ್ಸ್ ಎಗ್ ನಲ್ಲಿ ಆತ ಮೊಟ್ಟೆ ಸಂಗ್ರಹಿಸಲು ತೆರಳಿದ್ದ. ಅಲ್ಲಿ ಒಂದು ಮೊಟ್ಟೆ ಬೃಹದಾಕಾರದಲ್ಲಿತ್ತು. ಸಾಮಾನ್ಯ ಮೊಟ್ಟೆಗಿಂತ ಮೂರು ಪಟ್ಟು ದೊಡ್ಡದಾಗಿತ್ತು. ಬರೋಬ್ಬರಿ ವಯಸ್ಕ ವ್ಯಕ್ತಿಯೊಬ್ಬ ತನ್ನ ಕೈ ಪೂರ್ತಿ ಹಿಡಿದು ಕೊಳ್ಳಬಹುದಾದಷ್ಟು ದೊಡ್ಡ ಗಾತ್ರದ ಮೊಟ್ಟೆ ಪತ್ತೆಯಾಗಿದೆ.
ಅದನ್ನು ಒಡೆದು ನೋಡಿದಾಗ ಮತ್ತೊಂದು ಅಚ್ಚರಿ ಕಾದಿತ್ತು. ಯಾಕಂದ್ರೆ ಮೊಟ್ಟೆಯೊಳಗೆ ಮತ್ತೊಂದು ಮೊಟ್ಟೆ. ಅದರೊಳಗೆ ಹಳದಿ ಬಣ್ಣದ ಲೋಳೆ ಇದ್ದುದಲ್ಲದೆ, ಇನ್ನೊಂದು ಮೊಟ್ಟೆಯೂ ಇದ್ದುದು ಪತ್ತೆಯಾಗಿದೆ.
ಇದನ್ನು ಫೇಸ್ಬುಕ್ ನಲ್ಲಿ ಆತ ಪೋಸ್ಟ್ ಮಾಡಿದ್ದಾನೆ. ಸಾಮಾನ್ಯವಾಗಿ ಮೊಟ್ಟೆ 58 ಗ್ರಾಂ ತೂಕವಿರುತ್ತದೆ. ಆದ್ರೆ ಈ ಮೊಟ್ಟೆ 176 ಗ್ರಾಂ ತೂಕವಿತ್ತು.1923ರಿಂದ್ಲೂ ಈ ಫಾರ್ಮ್ ಅಸ್ತಿತ್ವದಲ್ಲಿದೆ. ಇಷ್ಟು ದೊಡ್ಡ ಮೊಟ್ಟೆ ಸಿಕ್ಕಿರೋದು ಇದೇ ಮೊದಲು. ತಜ್ಞರು ಕೂಡ ಮೊಟ್ಟೆಯೊಳಗೊಂದು ಮೊಟ್ಟೆ ನೋಡಿ ಅಚ್ಚರಿಪಟ್ಟಿದ್ದಾರೆ. ಕೋಳಿ ಬಹಳ ಒತ್ತಡದಲ್ಲಿದ್ರೆ ಈ ರೀತಿ ಆಗುತ್ತದೆ ಅನ್ನೋದು ಅವರ ಅಭಿಪ್ರಾಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?