ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು, ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.
ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..
ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..
ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..
ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..
ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..
ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..
ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..
ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..
ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…