ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.
ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.
ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಮತ್ತು ಉಪಾಸನಾ ಕೊನಿಡೆಲಾ ಅವರು ಸಹ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
LPG ವಿತರಣಾ ಸಂಸ್ಥೆ LPG ಸಿಲಿಂಡರ್ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006 ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್ನಲ್ಲಿ ದಾಖಲಿಸಬೇಕು. ಸಿಲಿಂಡರ್ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.