ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ ನೀಡಿ ಯುವ ಪರಿವರ್ತಕರೆಂದು ಪ್ರಮಾಣೀಕರಿಸಲಾಗುತ್ತದೆ. ಅರ್ಜಿ ಸಲ್ಲಿಸುವವರು ಪರಸ್ಪರ ಬಾಂಧವ್ಯಾಭಿವೃದ್ದಿಯ ಕೌಶಲ್ಯ, ಉತ್ತಮ ಸಂವಹನ ಮತ್ತು ಉಲ್ಲೇಖ ಸೇವೆಗಳಿಗೆ ಸಂಘ ಸಂಸ್ದೆಗಳ ಜೊತೆ ಸಹಯೋಗ ಏರ್ಪಡಿಸುವ ಕೌಶಲ್ಯ ಜತೆಗೆ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರಬೇಕು.
ಯಾವುದೇ ಪದವಿ ಅಥವಾ ಮೇಲ್ಟಟ್ಟ ಶೈಕ್ಷಣೆಕ ಅರ್ಹತೆ ಹಾಗೂ ಕನಿಷ್ಟ ವಯಸ್ಸು 21 ರಿಂದ 35 ವಯಸ್ಸಿನವರಾಗಿರಬೇಕು. ಅಭ್ಯರ್ಥಿಗಳು ತಮ್ಮ ಸಂಪೂರ್ಣ ಮಾಹಿತಿಯನ್ನು ಸೆಪ್ಟೆಂಬರ್ 21 ರ ಸಂಜೆ 5 ಗಂಟೆಯೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರಕ್ಕೆ ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿಯನ್ನು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಇವರಿಗೆ ಸೆಪ್ಟೆಂಬರ್ 21 ರೊಳಗೆ ಅರ್ಜಿಯನ್ನು ತಲುಪಿಸಬೇಕು. ಸಂದರ್ಶನದ ದಿನಾಂಕವನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೂರವಾಣಿ ಮೂಲಕ ತಿಳಿಸಲಾಗುವುದು.. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 08152-222340, ಯುವ ಸಮಾಲೋಚಕರಾದ ಚಂದನ.ಎಮ್.ಜಿ ( 9611886172 )ಅಥವಾ ಯುವ ಪರಿರ್ವಕರಾದ ಮುನಿರಾಜು (9663036008) ರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…
ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….