ಸುದ್ದಿ

23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

48

ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ.

ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ ತಲೆ ಕೆಳಗೆ ಮಾಡಿ, ಕಾಲಿನಿಂದ ಕಂಬಿ ಹಿಡಿದು ಸಾಹಸ ಮಾಡಲು ಹೋಗಿದ್ದಾರೆ. ಈ ವೇಳೆ ಬ್ಯಾಲೆನ್ಸ್​ ತಪ್ಪಿದಾಗ ಅಲೆಕ್ಸಾ ಬಾಲ್ಕನಿಯಿಂದ80 ಅಡಿ ಕೆಳಗೆ ಬಿದ್ದಿದ್ದಾರೆ. ಅಪಾಯಕಾರಿ ಸಾಹಸ ಮಾಡುವ ಚಿತ್ರ ಸೆರೆಯಾಗಿದ್ದು,ಎಲ್ಲೆಡೆ ವೈರಲ್ ಆಗಿದೆ. ಆಕೆ ಕೆಳಗೆ ಬೀಳುವ ಮುನ್ನ ಆಕೆಯ ಸ್ನೇಹಿತ ಈ ಚಿತ್ರವನ್ನು ಕ್ಲಿಕ್ಕಿಸಿದ್ದಾನೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಆಕೆ ಕೆಳಗೆ ಬಿದ್ದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂತರ ಆಕೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ.

ಕೆಳಗೆ ಬಿದ್ದಾಗ ಹೆಚ್ಚಿನ ಪ್ರಮಾಣದಲ್ಲಿ ರಕ್ತಸ್ರಾವವಾಗಿರುವುದರಿಂಧ ಟೆರಾಜಾ ಕುಟುಂಬಸ್ಥರು ರಕ್ತದಾನಿಗಳಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು. ಮನವಿ ಸ್ಪಂದಿಸಿ, ನೂರು ಮಂದಿ ರಕ್ತ ದಾನ ಮಾಡಲು ಮುಂದೆ ಬಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ