News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ರಜೆಯ ದಿನವಾಗಿರುವ ಇಂದು, ನಿಮ್ಮ ರಾಶಿ ಭವಿಷ್ಯ ಹೇಗೆ ಪ್ರಭಾವ ಬೀರಲಿದೆ ನೋಡಿ..ಶೇರ್ ಮಾಡಿ

375

ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿರೀಕ್ಷಿತ ಕೆಲಸಕಾರ್ಯಗಳು ನಡೆಯಲಿವೆ. ಒಮ್ಮೊಮ್ಮೆ ಮಾನಸಿಕ ಅಶಾಂತಿ-ಖನ್ನತೆ ಕಾಡಬಹುದು. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ನಿರುದ್ಯೋಗಿಗಳಿಗೆ ಆಗಾಗ ಅಡೆತಡೆಗಳಿಂದ ಉದ್ಯೋಗ ಲಾಭ ತಂದೀತು. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ.

ವೃಷಭ:-

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಬಹುದು. ನಿಶ್ಚಿತ ಕೆಲಸಕಾರ್ಯಗಳು ನಡೆದರೂ ಆಗಾಗ ಧನವ್ಯಯವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದಾಯಕ ಆದಾಯ ವರ್ಧಿಸಲಿದೆ. ಕುಲದೇವತಾ ಆರಾಧನೆಯಿಂದ ಯಶಸ್ಸು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು.

ಮಿಥುನ:

ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಶುಭಕಾರ್ಯಗಳು ನಡೆಯಲಿವೆ. ನ್ಯಾಯಾಲಯದ ಕೆಲಸಕಾರ್ಯಗಳಲ್ಲಿ ಮುನ್ನಡೆ ಇರುತ್ತದೆ. ಸಂತಾನ ಭಾಗ್ಯದಲ್ಲಿ ಸಂಚನೆ ತಂದೀತು. ವೃತ್ತಿಕ್ಷೇತ್ರದಲ್ಲಿ ಅಡಚಣೆಗಳು ಇರುತ್ತವೆ.

ಕಟಕ :-

ಸುಖ ಸಂತೋಷಗಳನ್ನು ಅನುಭವಿಸಲು ಸಾಂಸಾರಿಕವಾಗಿ ಹೊಂದಾಣಿಕೆ ಇರಲಿ. ಆಗಾಗ ಪ್ರಯತ್ನಬಲದಲ್ಲಿ ಸೋಲನ್ನು ಅನುಭವಿಸಬೇಕಾಗುತ್ತದೆ. ಋಣಬಾಧೆಯಿಂದ ಮುಕ್ತರಾಗುವಿರಿ. ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಹಿತೈಷಿಗಳ ಆಗಮನ ಸಾಧ್ಯತೆ.

 ಸಿಂಹ:

ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ಮನೆಯವರೊಂದಿಗೆ ಸಂತಸದ ಕ್ಷಣ. ಕಾರ್ಯರಂಗದಲ್ಲಿ ಪ್ರತಿಸ್ಪರ್ಧಿಗಳಿಂದ ಅಡಚಣೆ ತಂದೀತು. ಸರಕಾರಿ ವೃತ್ತಿಯವರಿಗೆ ಅನಾವಶ್ಯಕವಾಗಿ ಸಹೋದ್ಯೋಗಿಗಳಿಂದ ಕಿರುಕುಳ ವಿರುತ್ತದೆ. ದಿನಾಂತ್ಯದಲ್ಲಿ ಶುಭವಾರ್ತೆ.

ಕನ್ಯಾ :-

ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ. ಗುರುಬಲದಿಂದ ಶುಭಮಂಗಲ ಕಾರ್ಯದಿಂದ ನೆಮ್ಮದಿ ತರುತ್ತದೆ. ಮಕ್ಕಳಿಂದ ಶುಭಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳ ಪ್ರಯತ್ನಬಲ ಶುಭಫ‌ಲವನ್ನು ನೀಡಲಿದೆ. ಧನಾಗಮನ ಉತ್ತಮ.

ತುಲಾ:

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ಉತ್ತಮ ಆದಾಯ ನಿರೀಕ್ಷೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ಹಿರಿಯರ ಸ್ಥಿರಾಸ್ತಿ ಲಾಭ ತಂದೀತು. ಚಿಂತಿತ ಕೆಲಸಕಾರ್ಯಗಳು ಹಂತ ಹಂತವಾಗಿ ನೆರವೇರುತ್ತವೆ. ಆಗಾಗ ಬಂಧುಬಳಗದವರ ಸಹಕಾರದಿಂದ ಮುನ್ನಡೆ. ವಾಹನ ಖರೀದಿಗೆ ಸಕಾಲವಿದು.

ವೃಶ್ಚಿಕ :-

ಮಕ್ಕಳ ವಿಚಾರದಲ್ಲಿ ಸಮಸ್ಯೆ ಎದುರಾದೀತು. ಕುಟುಂಬದಲ್ಲಿ ಕಲಹಕ್ಕೆ ಕಾರಣರಾಗದಂತೆ ವರ್ತಿಸಿರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಧನಸ್ಸು:

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಔದ್ಯೋಗಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಇರುತ್ತದೆ. ಆರೋಗ್ಯ ಭಾಗ್ಯ ಸುಧಾರಿಸುತ್ತದೆ. ಉದ್ಯೋಗಿಗಳಲ್ಲಿ ಕಾರ್ಯಒತ್ತಡ ಹೆಚ್ಚಿಸಲಿದೆ. ಉತ್ತಮ ಜನರ ಸಹಕಾರ ಆಗಾಗ ತೋರಿ ಬರುತ್ತದೆ.

ಮಕರ :-

ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ. ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ

ಕುಂಭ:-

ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ಗೃಹಕೃತ್ಯಗಳಲ್ಲಿ ತೊಂದರೆ ಬಂದೀತು. ಅಧಿಕಾರಿ ಜನರಿಂದ ಪ್ರಯೋಜನವನ್ನು ಪಡೆಯಲಿದ್ದೀರಿ. ಆರ್ಥಿಕವಾಗಿ ಧನಾಗಮನದಿಂದ ಸಮಾಧಾನ ಸಿಗಲಿದೆ. ದಿನಾಂತ್ಯ ಶುಭವಿದೆ.

ಮೀನ:-

ಅನಾವಶ್ಯಕವಾಗಿ ಅಪವಾದಗಳಿಗೆ ಸಿಲುಕಿಕೊಳ್ಳುವಿರಿ. ವೃತ್ತಿರಂಗದಲ್ಲಿ ಆದಾಯದ ಮೂಲಗಳ ಬಗ್ಗೆ ಯೋಚಿಸುವಂತಾದೀತು. ಮಕ್ಕಳಿಗೆ ಮಾರ್ಗದರ್ಶನ ಅತೀ ಅಗತ್ಯವಾಗಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…

  • ದೇವರು-ಧರ್ಮ

    ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!

    ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…