ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ. ಇದರೊಂದಿಗೆ ಇನ್ನೊಂದೆಡೆ ಸರಕಾರಿ ಶಾಲೆಗಳು ಮರಣ ಶಯ್ಯೆಯಲ್ಲಿ ಮಲಗಿದಂತೆ ಇಂದೋ ನಾಳೆಯೋ ಬಾಗಿಲು ಮುಚ್ಚುವ ಭೀತಿಯಲ್ಲಿ ಕಾರ್ಯಾಚರಿಸುತ್ತಿದೆ.
ಒಂದೆಡೆ ಸರಕಾರಿ ಶಾಲೆಯಲ್ಲಿನ ಸೌಲಭ್ಯಗಳ ಕೊರತೆ, ಇನ್ನೊಂದೆಡೆ ಖಾಸಗಿ ಶಾಲೆಗಳ ದೌಲತ್ತಿನ ನಡುವೆ ಇದೀಗ ಚಳಿಗಾಳದ ಅಧಿವೇಶನದಲ್ಲಿ ಹೊಸದೊಂದು ಮಸೂದೆಯು ಮಂಡನೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವುಳ್ಳ ಶಿಕ್ಷಣವನ್ನು ಪಡೆಯುತ್ತಿದ್ದರೆ, ಇನ್ನೊಂದೆಡೆ ಬಡಮಕ್ಕಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
ಅಧಿಕಾರಿಗಳ ಮಕ್ಕಳು ಕಲಿಯುವ ಶಾಲೆಗಳು ಅಭಿವೃದ್ಧಿ ಹೊಂದುತ್ತಿದ್ದು, ಸರಕಾರಿ ಶಾಲೆಗಳು ನನೆಗುದಿಗೆ ಬಿದ್ದಿವೆ. ಇದೀಗ ಸರಕಾರವು ಹೊಸ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದ್ದು, ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳು(ಜನಪ್ರತಿನಿಧಿಗಳು) ಮಕ್ಕಳು ಕಡ್ಡಾಯವಾಗಿ ಸರಕಾರಿ ಶಾಲೆಗೆ ದಾಖಲಾಗಬೇಕು ಎಂಬುವುದು. ಈ ಕುರಿತಾದಂತೆ ಹಲವು ವರ್ಷಗಳಿಂದಲೇ ಬೇಡಿಕೆಯಿದ್ದು, ಸಿದ್ದರಾಂಯ್ಯ ಸರಕಾರವು ಇದನ್ನು ಜಾರಗೆ ತರುವ ಸಂಭವವಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಈ ವಿಧೇಯಕವನ್ನು ವಿಧಾನ ಪರಿಷತ್ನಲ್ಲಿ ಮಂಡಿಸುವ ಸಂಬಂಧ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಒಪ್ಪಿಗೆ ಪಡೆದಿದ್ದಾರೆ. ಬಳಿಕ ವಿಧಾನಸಭೆಯಲ್ಲೂ ಚರ್ಚೆಗೆ ಒಳಪಟ್ಟು ನಂತರ ಶಾಸನವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.