ರಾಜಕೀಯ

20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

By admin

May 23, 2019

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ.

ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ ಎದ್ದಿದೆ.

ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ಸಿನ 20 ಶಾಸಕರು ಯಡಿಯೂರಪ್ಪನವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗಿದ್ದು, ಯಡಿಯೂರಪ್ಪ ಅವರಿಗೆ ಸುಮಾರು 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಫೋನ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಸಿಎಂ ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರುವಾಯ್ತಾ ಎನ್ನುವ ಪ್ರಶ್ನೆ ಎದ್ದಿದೆ.