ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಳೆದ ವರ್ಷ ಸಾರಿಗೆ ಮುಷ್ಕರದ ವೇಳೆ ನೀಡಿದ್ದ ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಇನ್ನು ಈಡೇರಿಸದ ಹಿನ್ನೆಲೆಯಲ್ಲಿ ಇದೇ 30ನೇ ತಾರೀಖಿನಂದು ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಿದ್ದೇವೆ ಎಂದು ಎಐಟಿಯುಸಿ ಕಾರ್ಯದರ್ಶಿ ನಾಗರಾಜ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಅವರು ಮಾತನಾಡುತ್ತ 30 ರಂದು ಉಪವಾಸ ಸತ್ಯಗ್ರಹ ಆರಂಭಿಸಲು ಸಾರಿಗೆ ಇಲಾಖೆಯ ಸಿಬ್ಬಂದಿ ನಿರ್ಧರಿಸಿದ್ದಾರೆ.
ಅಂದು ಬಸ್ ಸೇವೆ ಸ್ಥಗಿತಗೊಂಡು ಸಾರ್ವಜನಿಕರಿಗೆ ತೊಂದರೆ ಆದರೆ ಅದಕ್ಕೆ ನಾವು ಹೊಣೆಯಲ್ಲ ಎಂದು ಅವರು ಹೇಳಿದ್ದಾರೆ.